ಸಲ್ಮಾನ್ ಖಾನ್ ಬೆನ್ನಲ್ಲೇ ಶಾರುಖ್ ಖಾನ್ಗೆ ಕೊಲೆ ಬೆದರಿಕೆಯೊಡ್ಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಛತ್ತೀಸಗಢದ ರಾಯಪುರದಿಂದ ಶಾರುಖ್ಗೆ 1 ಕೋಟಿ ಹಣ ನೀಡುವಂತೆ ಜೀವ ಬೆದರಿಕೆ ಬಂದಿದೆ.
ಫೈಝಾನ್ ಎಂಬ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಶಾರುಖ್ ಮುಂಬೈ ಬಾಂದ್ರಾ ಠಾಣೆಗೆ ದೂರು ನೀಡಿದ್ದರು. ನಂತರ ಮಹಾರಾಷ್ಟ್ರ ಪೊಲೀಸರು ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನ ಛತ್ತೀಸ್ಗಢದ ರಾಯಪುರದಲ್ಲಿ ಅರೆಸ್ಟ್ ಮಾಡಿದ್ದಾರೆ.
ಬಾಲಿವುಡ್ ನಟ ಸಲ್ಮಾನ್ ಖಾನ್ ಹಲವು ದಿನಗಳಿಂದ ಗ್ಯಾಂಗ್ಸ್ಟರ್ಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಲ್ಮಾನ್ ಹೆಸರಿನಲ್ಲಿ ಒಂದರ ಹಿಂದೆ ಒಂದರಂತೆ ಬೆದರಿಕೆಗಳು ಬರುತ್ತಿವೆ. ನಟನ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ಪೊಲೀಸರು ಪ್ರಕರಣವನ್ನು ತ್ವರಿತವಾಗಿ ತನಿಖೆ ನಡೆಸುತ್ತಿದ್ದಾರೆ. ನವೆಂಬರ್ 5, ಮಂಗಳವಾರ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಶಾರುಖ್ ಖಾನ್ಗೆ ಬೆದರಿಕೆಯ ದೂರು ದಾಖಲಾಗಿದ್ದು, ಇದೀಗ ಬೆದರಿಕೆ ಹಾಕಿದ ವ್ಯಕ್ತಿಯನ್ನ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ : ಪವಿತ್ರಾಗೌಡಗೆ ಇನ್ನೆರೆಡು ವಾರ ಜೈಲೇ ಗತಿ.. ಬೇಲ್ ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿಕೆ..!