Download Our App

Follow us

Home » ಜಿಲ್ಲೆ » ಮುಡಾ ಸಭೆಯಲ್ಲಿ ಮಹತ್ವದ ನಿರ್ಧಾರ.. 50:50 ಅನುಪಾತದಲ್ಲಿ ಸೈಟ್‌ ಪಡೆದವರಿಗೆ ಬಿಗ್ ಶಾಕ್..!

ಮುಡಾ ಸಭೆಯಲ್ಲಿ ಮಹತ್ವದ ನಿರ್ಧಾರ.. 50:50 ಅನುಪಾತದಲ್ಲಿ ಸೈಟ್‌ ಪಡೆದವರಿಗೆ ಬಿಗ್ ಶಾಕ್..!

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಅಕ್ರಮ ಪ್ರಕರಣ ಬೆಳಕಿಗೆ ಬಂದ ಬಳಿಕ ಇದೇ ಮೊದಲ ಬಾರಿಗೆ ಮುಡಾ ಸಭೆ ನಡೆಸಿದ್ದು, ಈ ಸಭೆಯಲ್ಲಿ 50:50 ನಿವೇಶನಗಳನ್ನು ರದ್ದು ಮಾಡಲು ಒಮ್ಮತದ ನಿರ್ಣಯ ಕೈಗೊಂಡಿದೆ.

ಮುಡಾ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಮುಡಾ ಸಭೆಯಲ್ಲಿ 50-50 ಅನುಪಾತದಲ್ಲಿ ಹಂಚಿಕೆಯಾದ ಸೈಟಗಳ ಜಪ್ತಿಗೆ ಸದಸ್ಯರು ಒಮ್ಮತದ ನಿರ್ಧಾರ ತೆಗೆದುಕೊಂಡಿದ್ದಾರೆ. ನ್ಯಾಯಮೂರ್ತಿ ಪಿ.ಎನ್ ದೇಸಾಯಿ ವರದಿ ನಂತರ ಜಪ್ತಿಯ ವರದಿ ಅಂಗಕರಿಸಲು ತೀರ್ಮಾನಿಸಲಾಗಿದೆ. ಈ ಮೂಲಕ ಅಕ್ರಮವಾಗಿ 50:50 ಸೈಟ್ ಪಡೆದವರಿಗೆ ಸಂಕಷ್ಟ ಎದುರಾಗಿದೆ.

ಮುಡಾದಲ್ಲಿ 2021ರಿಂದ 2024ರ ಜೂನ್‌ವರೆಗೆ 50:50/ಬದಲಿ ನಿವೇಶನ ಸ್ಕೀಂನಡಿ 4,839 ನಿವೇಶನಗಳನ್ನು ಹಂಚಲಾಗಿದೆ ಎಂದು ಹೇಳಲಾಗುತ್ತಿದೆ. ಕೆಲವರ ಪ್ರಕಾರ 2020ರಿಂದಲೇ ಈ ಸ್ಕೀಂನಡಿ ನಿವೇಶನ ಹಂಚಿಕೆ ಶುರುವಾಗಿದೆ. ಒಂದು ವೇಳೆ 2020ರಿಂದಲೇ ಹಂಚಿಕೆಯಾದ ನಿವೇಶನಗಳನ್ನು ಪರಿಗಣಿಸಿದರೆ ಈವರೆಗೆ 50:50/ಬದಲಿ ನಿವೇಶನ ಯೋಜನೆಯಡಿ ಹಂಚಿಕೆಯಾದ ಸೈಟುಗಳ ಸಂಖ್ಯೆ 5 ಸಾವಿರ ದಾಟಲಿದೆ ಎನ್ನಲಾಗಿದೆ. ಈ ಎಲ್ಲಾ ನಿವೇಶನಗಳು ರದ್ದಾಗುವ ಸಾಧ್ಯತೆಯಿದೆ.

ನಿನ್ನೆಯ ಸಭೆಯಲ್ಲಿ ಶಾಸಕರಾದ ಜಿ.ಟಿ. ದೇವೇಗೌಡ, ದರ್ಶನ್​ ಧ್ರುವನಾರಾಯಣ್, ಹರೀಶ್ ಗೌಡ, ಮಧು ಮಾದೇಗೌಡ, ರಮೇಶ್ ಬಂಡಿಸಿದ್ದೇಗೌಡ, ಶ್ರೀವತ್ಸ, ಎಚ್. ವಿಶ್ವನಾಥ್, ನಗರ ಪೊಲೀಸ್​ ಆಯುಕ್ತೆ ಸೀಮಾ ಲಾಟ್ಕರ್ ಸೇರಿದಂತೆ ಆಹ್ವಾನಿತ ಶಾಸಕರು ಹಾಜರಿದ್ದರು.

ಇದನ್ನೂ ಓದಿ : ಇನ್ನೂ ಮೂರುವರೆ ವರ್ಷ ನಾನೇ ಮುಖ್ಯಮಂತ್ರಿ – ವಿರೋಧಿಗಳಿಗೆ ಸಿದ್ದು ಕೌಂಟರ್..!

Leave a Comment

DG Ad

RELATED LATEST NEWS

Top Headlines

ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರದ ರಿಲೀಸ್​ ಡೇಟ್​​ ಅನೌನ್ಸ್..!

ಕಮಲ್ ಹಾಸನ್ ಅಭಿನಯದ ಮತ್ತು ಮಣಿರತ್ನಂ ನಿರ್ದೇಶನದ ‘ಥಗ್ ಲೈಫ್’ ಚಿತ್ರ ವಿಶ್ವದಾದ್ಯಂತ 2025ರ ಜೂನ್ 5ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಇಂದು ಕಮಲ್ ಹಾಸನ್ ಅವರ ಹುಟ್ಟುಹಬ್ಬದ

Live Cricket

Add Your Heading Text Here