Download Our App

Follow us

Home » ರಾಷ್ಟ್ರೀಯ » ದೆಹಲಿಯಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ : ಕರ್ತವ್ಯ ಪಥದಲ್ಲಿ ನಾರಿ ಶಕ್ತಿ ಅನಾವರಣ..!

ದೆಹಲಿಯಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ : ಕರ್ತವ್ಯ ಪಥದಲ್ಲಿ ನಾರಿ ಶಕ್ತಿ ಅನಾವರಣ..!

ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು. ಇದೀಗ ಕರ್ತವ್ಯಪಥ್​​ನಲ್ಲಿ ಗಣರಾಜ್ಯೋತ್ಸವದ ಪರೇಡ್‌ ನಡೆಯುತ್ತಿದೆ.

ಧ್ವಜಾರೋಹಣದ ಬಳಿಕ ದೇಶದ ಹಲವು ರಾಜ್ಯಗಳಿಂದ ಆಗಮಿಸಿದ ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯುತ್ತಿದೆ. ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಉಪಸ್ಥಿತರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಪರೇಡ್‌ ಮೈದಾನಕ್ಕೆ ಆಗಮಿಸಿದ್ದಾರೆ. ಈ ವರ್ಷ 50 ಸಾವಿರಕ್ಕೂ ಹೆಚ್ಚು ಮಂದಿ ಪರೇಡ್ ವೀಕ್ಷಿಸಲು ಕರ್ತವ್ಯ ಪಥಕ್ಕೆ ಬಂದಿದ್ದಾರೆ.

ಪರೇಡ್​​ನಲ್ಲಿ ದೇಶದ ಮಿಲಿಟರಿ ಶಕ್ತಿ, ಅದರ ಸನ್ನದ್ಧತೆಯನ್ನು ಪ್ರದರ್ಶಿಸಲಾಗಿದೆ. ಅಚ್ಚರಿಯ ಸಂಗತಿ ಎಂದರೆ ಈ ಬಾರಿ ಗಣರಾಜೋತ್ಸವದಲ್ಲಿ ಶೇ.80ರಷ್ಟು ಮಹಿಳೆಯರೇ ತುಂಬಿದ್ದರು ಎಂಬುದು ವಿಶೇಷ. ಇನ್ನು ಮಧ್ಯಾಹ್ನ ಭಾರತದ ಕಲಾ ವೈವಿಧ್ಯತೆ ಕೊಂಡಾಡುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ನಾರಿ ಶಕ್ತಿಯೇ ವಿಶೇಷ:

ಈ ಬಾರಿ ವಿಶೇಷವಾಗಿ ʻನಾರಿ ಶಕ್ತಿ ಪ್ರದರ್ಶನʼ ಕಂಡುಬಂದಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಪೊಲೀಸರು ಕರ್ತವ್ಯ ಪಥದಲ್ಲಿ ಹೆಜ್ಜೆ ಹಾಕಿದ್ದಾರೆ. ʻಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣʼ ವಸ್ತು ವಿಷಯ ಅಡಿಯಲ್ಲಿ 194 ಮಹಿಳಾ ಪೊಲೀಸರು ಪರೇಡ್‌ ನಡೆಸಿಕೊಟ್ಟಿದ್ದಾರೆ. ಐಪಿಎಸ್‌ ಅಧಿಕಾರಿ ಶ್ವೇತಾ ಕೆ. ಸುಗತನ್‌ ಅವರು ಈ ಪಡೆಯನ್ನು ಮುನ್ನಡೆಸಿದ್ದಾರೆ.

ಜೊತೆಗೆ 100 ಮಹಿಳಾ ಕಲಾವಿದರು ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸುವ ಮೆರೆವಣಿಗೆಯನ್ನು ನಡೆಸಿಕೊಟ್ಟಿದ್ದಾರೆ. ಸಂಖ್, ನಾದಸ್ವರ, ನಗದ ಇತ್ಯಾದಿ ಸಂಗೀತದೊಂದಿಗೆ ಮೆರವಣಿಗೆ ಆರಂಭವಾಗಿದ್ದು, ಇದರೊಂದಿಗೆ ಭಾರತೀಯ ವಾಯುಪಡೆಯು, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಸೇರಿದಂತೆ ವಿವಿಧ ಭದ್ರತಾ ಪಡೆಗಳು ಪರೇಡ್‌ನಲ್ಲಿ ಗಮನ ಸೆಳೆದಿದೆ.

ಇದನ್ನೂ ಓದಿ : ಜ್ಞಾನವಾಪಿ ಮಸೀದಿ ಜಾಗದಲ್ಲೇ ಬೃಹತ್​ ದೇಗುಲವಿತ್ತು : ಪುರಾತತ್ವ ಇಲಾಖೆ ವರದಿ ಬಹಿರಂಗ..!

Leave a Comment

DG Ad

RELATED LATEST NEWS

Top Headlines

ಪಂಚಭೂತಗಳಲ್ಲಿ ಲೀನರಾದ ಮನಮೋಹನ್ ಸಿಂಗ್ – ಅಂತ್ಯವಾಯ್ತು ‘ಸಾಧಕ’ನ ಪರ್ವ..!

ನವದೆಹಲಿ : ಹೊಸ ಭಾರತ ನಿರ್ಮಾಣದ ಕನಸು ಕಂಡ ಕನಸುಗಾರ ಮನಮೋಹನ್ ಸಿಂಗ್ ಇನ್ನು ನೆನಪು ಮಾತ್ರ. ಡಿ.​ 26ರಂದು ಇಹಲೋಕ ಯಾತ್ರೆ ಮುಗಿಸಿದ ಭಾರತದ ಮಾಜಿ

Live Cricket

Add Your Heading Text Here