Download Our App

Follow us

Home » ಜಿಲ್ಲೆ » ಬೆಳಗಾವಿ : ಗ್ರಾಮ ಪಂಚಾಯಿತಿ ಕಚೇರಿಗೆ ಪೆಟ್ರೋಲ್‌ ಬಾಂಬ್‌ ಎಸೆದ ಕಿಡಿಗೇಡಿಗಳು..!

ಬೆಳಗಾವಿ : ಗ್ರಾಮ ಪಂಚಾಯಿತಿ ಕಚೇರಿಗೆ ಪೆಟ್ರೋಲ್‌ ಬಾಂಬ್‌ ಎಸೆದ ಕಿಡಿಗೇಡಿಗಳು..!

ಬೆಳಗಾವಿ : ಗ್ರಾಪಂ ಕಚೇರಿಗೆ ಬೆಂಕಿ ಬಿದ್ದಿರುವ ಘಟನೆ ಬೆಳಗಾವಿಯ ಕಾಲಕಾಂಬದಲ್ಲಿ ನಡೆದಿದೆ. ಕಿಡಿಗೇಡಿಗಳು ಪೆಟ್ರೋಲ್​ ಬಾಂಬ್​ ಎಸೆದಿದ್ದಾರೆ ಎಂದು ಶಂಕಿಸಲಾಗಿದೆ. ನಿನ್ನೆ ಗ್ರಾಮ ಪಂಚಾಯಿತಿಯಲ್ಲಿ ಎರಡು ಗುಂಪುಗಳ ಮಧ್ಯೆ ತೀವ್ರ ಗಲಾಟೆಯಾಗಿತ್ತು. ಇದೇ ವಿಚಾರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ತಡರಾತ್ರಿ ಆಗಮಿಸಿದ್ದ ದುಷ್ಕರ್ಮಿಗಳು ಬಿಯರ್ ಬಾಟಲ್​​ನಲ್ಲಿ ಪೆಟ್ರೋಲ್ ಸುರಿದು ಬಟ್ಟೆಗಳನ್ನ ಎಸೆದು ಬೆಂಕಿ ಹಚ್ಚಿದ್ದಾರೆ. ಅಷ್ಟೇ ಅಲ್ಲದೆ ಅಲ್ಲಿದ್ದ ಸಿಸಿಟಿವಿಗಳನ್ನ ತೆಗೆದುಕೊಂಡು ಹೋಗಿದ್ದಾರೆ.

ಸಾಕ್ಷಿ ನಾಶ ಮಾಡಲು ಸಿಸಿಟಿವಿ ಕಿತ್ತುಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಸಿಸಿ ಕ್ಯಾಮೆರಾ ಸೇರಿದಂತೆ ಸ್ಥಳ ಪರಿಶೀಲನೆ ಮಾಡಿದ್ದಾರೆ. ಈ ಘಟನೆ ಮಾರಿಹಾಳ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ : ‘ಮರ್ಯಾದೆ ಪ್ರಶ್ನೆ’ ಚಿತ್ರತಂಡದಿಂದ ಚಾಲಕರ ದಿನಾಚರಣೆ ಆಚರಣೆ..!

Leave a Comment

DG Ad

RELATED LATEST NEWS

Top Headlines

ಅರಣ್ಯ ಇಲಾಖೆಯಲ್ಲಿ ಲಂಚದ ರೇಟ್ ​ಕಾರ್ಡ್.. ಅಪ್ರೈಸಲ್ ಕಮಿಟಿಯಲ್ಲಿ ಲಕ್ಷ ಲಕ್ಷ ಲೂಟಿ..!

ಬೆಂಗಳೂರು : ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಸ್ಟೇಟ್ ಲೆವೆಲ್ ಎಕ್ಸ್​ಫರ್ಟ್​ ಅಪ್ರೈಸಲ್ ಕಮಿಟಿ ವಿರುದ್ದ ಇದೀಗ ಲಕ್ಷ ಲಕ್ಷ ಹಣ ಸುಲಿಗೆ ಮಾಡುತ್ತಿರುವ ಗಂಭೀರ ಆರೋಪ

Live Cricket

Add Your Heading Text Here