Download Our App

Follow us

Home » ರಾಷ್ಟ್ರೀಯ » ಕರ್ನಾಟಕ ಕಾಂಗ್ರೆಸ್​​ನ ಎಟಿಎಂ ಆಗಿದೆ, 700 ಕೋಟಿ ಸುಲಿಗೆಯಾಗಿದೆ – ಅಬಕಾರಿ ಹಗರಣದ ಬಗ್ಗೆ ಪ್ರಧಾನಿ ಮೋದಿ ಕಿಡಿ..!

ಕರ್ನಾಟಕ ಕಾಂಗ್ರೆಸ್​​ನ ಎಟಿಎಂ ಆಗಿದೆ, 700 ಕೋಟಿ ಸುಲಿಗೆಯಾಗಿದೆ – ಅಬಕಾರಿ ಹಗರಣದ ಬಗ್ಗೆ ಪ್ರಧಾನಿ ಮೋದಿ ಕಿಡಿ..!

ಮಹಾರಾಷ್ಟ್ರ : ಕರ್ನಾಟಕದ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ಚುನಾವಣೆಗಾಗಿ ಕರ್ನಾಟಕದ ಮದ್ಯ ಮಾರಾಟಗಾರರಿಂದ 700 ಕೋಟಿ ರು. ಲೂಟಿ ಮಾಡಲಾಗಿದೆ. ಈ ಹಣವನ್ನು ಮಹಾರಾಷ್ಟ್ರ ಚುನಾವಣೆಗೆ ಬಳಸಲಾಗುತ್ತಿದೆ ಎಂದಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಇತ್ತೀಚೆಗೆ ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಅವರ ವಿರುದ್ಧ ಮದ್ಯ ಮಾರಾಟಗಾರರು ಮಾಡಿರುವ ಲಂಚದ ಆರೋಪವನ್ನು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

ಅಕೋಲಾದಲ್ಲಿ ನಡೆದ ಚುನಾವಣೆ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅಬಕಾರಿ ಹಗರಣದ ವಿರುದ್ಧ ಕಿಡಿ ಕಾರಿದ್ದಾರೆ. ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶ್​ ಕಾಂಗ್ರೆಸ್ ಎಟಿಎಂ. ಕಾಂಗ್ರೆಸ್​ ಎಲ್ಲಿ ಸರ್ಕಾರ ರಚನೆ ಮಾಡುತ್ತೆ ಅಲ್ಲಿ ಲೂಟಿ ಮಾಡುತ್ತೆ, ಎಲ್ಲಿ ಕಾಂಗ್ರೆಸ್ ಸರ್ಕಾರ ರಚನೆ.. ಆ ರಾಜ್ಯ ಕಾಂಗ್ರೆಸ್‌ನ ರಾಜಮನೆತನಕ್ಕೆ ATM. ಇನ್ನು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆದ್ದರೆ ಎಷ್ಟು ಲೂಟಿ ಮಾಡಬಹುದು..? ಎಂದು ಪ್ರಶ್ನೆಸಿದ್ದಾರೆ.

ಚುನಾವಣೆ ಗೆಲ್ಲಲು ಕಾಂಗ್ರೆಸ್ ಇಷ್ಟೊಂದು ಭ್ರಷ್ಟಾಚಾರ ನಡೆಸಿದೆ ಎಂದಾದರೆ, ಒಮ್ಮೆ ಅಧಿಕಾರಕ್ಕೆ ಬಂದರೆ ಎಷ್ಟು ಭ್ರಷ್ಟಾಚಾರ ಮಾಡುತ್ತದೆ ಎಂದು ನೀವೇ ಊಹಿಸಬಹುದು ಎಂದ ಮೋದಿ, ಮಹಾರಾಷ್ಟ್ರದಲ್ಲಿ ಈ ಭ್ರಷ್ಟಾಚಾರ ಪುನಾರಾರ್ತನೆ ಆಗಬಾರದು ಎಂದರೆ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಮೋಷನ್ ಪೋಸ್ಟರ್​​ನಲ್ಲೇ ಮೋಡಿ ಮಾಡಿದ “ರಾಜು ಜೇಮ್ಸ್ ಬಾಂಡ್” – ಡಿ.27ಕ್ಕೆ ಸಿನಿಮಾ ತೆರೆಗೆ..!

Leave a Comment

DG Ad

RELATED LATEST NEWS

Top Headlines

ಅರಣ್ಯ ಇಲಾಖೆಯಲ್ಲಿ ಲಂಚದ ರೇಟ್ ​ಕಾರ್ಡ್.. ಅಪ್ರೈಸಲ್ ಕಮಿಟಿಯಲ್ಲಿ ಲಕ್ಷ ಲಕ್ಷ ಲೂಟಿ..!

ಬೆಂಗಳೂರು : ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಸ್ಟೇಟ್ ಲೆವೆಲ್ ಎಕ್ಸ್​ಫರ್ಟ್​ ಅಪ್ರೈಸಲ್ ಕಮಿಟಿ ವಿರುದ್ದ ಇದೀಗ ಲಕ್ಷ ಲಕ್ಷ ಹಣ ಸುಲಿಗೆ ಮಾಡುತ್ತಿರುವ ಗಂಭೀರ ಆರೋಪ

Live Cricket

Add Your Heading Text Here