Download Our App

Follow us

Home » ರಾಜಕೀಯ » ಸಚಿವ ಜಮೀರ್​ ಅಹ್ಮದ್​ ಖಾನ್​ಗೆ ಬಿಗ್​ ಶಾಕ್ – ಜಮೀರ್​ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ..!

ಸಚಿವ ಜಮೀರ್​ ಅಹ್ಮದ್​ ಖಾನ್​ಗೆ ಬಿಗ್​ ಶಾಕ್ – ಜಮೀರ್​ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ..!

ಬೆಂಗಳೂರು : ಮೂಡಾ ಹಗರಣ ಸಂಬಂಧಿಸಿದಂತೆ ಸಿಎಂ ವಿರುದ್ದ ತನಿಖೆಗೆ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಚಿವ ಜಮೀರ್ ಅಹಮದ್ ಖಾನ್ ಬಿಗ್​ ಶಾಕ್ ಎದುರಾಗಿದೆ. ಸಚಿವ ಜಮೀರ್​ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ ನೀಡಿದ್ದಾರೆ.

ಮುಡಾ ಕೇಸ್​ನಲ್ಲಿ ತಮ್ಮ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಕೊಟ್ಟಿದ್ದ ಅನುಮತಿಯನ್ನು ಪ್ರಶ್ನಿಸಿ, ಸಿಎಂ ಸಿದ್ದರಾಮಯ್ಯನವರು ಹೈಕೋರ್ಟ್ ಮೊರೆ ಹೋಗಿದ್ದರು. ಸಿದ್ದರಾಮಯ್ಯನವರ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್, ರಾಜ್ಯಪಾಲರ ನಡೆ ಸರಿಯಾಗಿದೆ ಎಂದು ಹೇಳಿತ್ತು. ಆ ಮೂಲಕ, ಜನಪ್ರತಿನಿಧಿ ನ್ಯಾಯಾಲಯದಲ್ಲಿ ವಿಚಾರಣೆಗೆ ನೀಡಲಾಗಿದ್ದ ಈ ಪ್ರಕರಣದ ವಿಚಾರಣೆಯ ತಡೆಯೂ ತೆರವುಗೊಂಡಿತು.

ಸೆ. 25ರಂದು, ತೀರ್ಪು ನೀಡಿದ ಜನಪ್ರತಿನಿಧಿ ನ್ಯಾಯಾಲಯ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸುವಂತೆ ಹಾಗೂ ಎಫ್ಐಆರ್ ದಾಖಲಿಸುವಂತೆ ಮೈಸೂರು ಲೋಕಾಯುಕ್ತ ಎಸ್ಪಿಗೆ ಸೂಚನೆ ನೀಡಿತು.

ಈ ತೀರ್ಪಿನ ವಿರುದ್ಧ ಟೀಕೆ ಮಾಡಿದ್ದ ಜಮೀರ್ ಅಹ್ಮದ್, ನ್ಯಾಯಾಲಯದ ತೀರ್ಪು ರಾಜಕೀಯ ಪ್ರೇರಿತವಾಗಿದ್ದು, ಅದೊಂದು ರಾಜಕೀಯ ತೀರ್ಪು ಎಂದು ಹೇಳಿದ್ದರು. ಆ ಹಿನ್ನೆಲೆಯಲ್ಲಿ ಮುಡಾ ದೂರುದಾರರಲ್ಲೊಬ್ಬರಾದ ಟಿ.ಜೆ. ಅಬ್ರಹಾಂ ಅವರು ಜಮೀರ್ ಅವರ ವಿರುದ್ಧ ನ್ಯಾಯಾಂಗ‌ ನಿಂದನೆಯ ಜೊತೆಗೆ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಕ್ರಿಮಿನಲ್ ಪ್ರೊಸಿಡಿಂಗ್ ಗೆ ರಾಜ್ಯಪಾಲರಿಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯಪಾಲರು ಸಚಿವ ಜಮೀರ್​ ಅಹ್ಮದ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅಡ್ವೋಕೇಟ್ ಜನರಲ್​ಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ : ಅಭಿನಯ ಚಕ್ರವರ್ತಿ ಎದುರೇ ‘ಕೆಂಪೇಗೌಡ’ ಡೈಲಾಗ್ ಹೊಡೆದ ಚೈತ್ರಾ ಕುಂದಾಪುರ.. ಸುದೀಪ್​​ ರಿಯಾಕ್ಷನ್‌ ಹೇಗಿತ್ತು?

Leave a Comment

DG Ad

RELATED LATEST NEWS

Top Headlines

ಅರಿಹಂತ್​​​​ ಜ್ಯುವೆಲ್ಲರ್ಸ್ ಮಾಲೀಕನ ಮನೆ ಲೂಟಿ ಪ್ರಕರಣ – ನೇಪಾಳಿಗಳ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ..!

ಬೆಂಗಳೂರು : ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ಅರಿಹಂತ್ ಜ್ಯುವೆಲ್ಲರ್ಸ್ ಮಾಲೀಕನ ಮನೆ ಕಳ್ಳತನ ಪ್ರಕರಣ ಪೊಲೀಸರಿಗೆ ದೊಡ್ಡ ತಲೆನೋವು ತಂದೊಡ್ಡಿದೆ. ಸುಮಾರು 15 ಕೋಟಿ ರೂಪಾಯಿ

Live Cricket

Add Your Heading Text Here