ಬೆಂಗಳೂರು : ಖಾತೆ ಹಂಚಿಕೆಯ ಬೆನ್ನಲ್ಲೇ ರಾಮಲಿಂಗಾರೆಡ್ಡಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ಬಗ್ಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ರಾಮಲಿಂಗಾರೆಡ್ಡಿಯವರು ನನ್ನ ಆಪ್ತ ಸ್ನೇಹಿತರು. ಅವರ ಅಸಮಾಧಾನವನ್ನು ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ. ಅವರು ರಾಮಲಿಂಗಾರೆಡ್ಡಿ ಪಕ್ಷದ ಹಿರಿಯ ನಾಯಕರು, ಅವರಿಗೆ ಹಳ್ಳಿಗಳಲ್ಲಿ ಕೆಲಸ ಮಾಡಲು ಆಗಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಮಲಿಂಗಾರೆಡ್ಡಿ ಅವರಿಗೆ ಬೇರೆ ಖಾತೆ ನೀಡಬೇಕಂಬ ಆಪೇಕ್ಷೆ ಅವರಿಗಿದೆ. ಈ ಬಗ್ಗೆ ಅವರ ಜೊತೆ ಚರ್ಚಿಸುತ್ತೇನೆ. ಕ್ಯಾಬಿನೆಟ್ನಲ್ಲಿ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ : ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಪಂಚಮುಖಿ” – ಜೂ.26ಕ್ಕೆ ಸಿನಿಮಾ ರಿಲೀಸ್!
Author: Btv Kannada
Post Views: 314









