Download Our App

Follow us

Home » ಜಿಲ್ಲೆ » ಉಡುಪಿ : ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ – ಎಸ್ಐ ಸಹಿತ ಇಬ್ಬರು ಪೊಲೀಸರ ಅಮಾನತು..!

ಉಡುಪಿ : ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ – ಎಸ್ಐ ಸಹಿತ ಇಬ್ಬರು ಪೊಲೀಸರ ಅಮಾನತು..!

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ SI ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.

ಚೇರ್ಕಾಡಿ ಗ್ರಾಮದ ಮಹಿಳೆಗೆ ಶನಿವಾರ ರಾತ್ರಿ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಕೊಲ್ಲಂ ಮೂಲದ ಆರೋಪಿ ಬಿಜು ಮೋನುನನ್ನು ಪೊಲೀಸರು ಬ್ರಹ್ಮಾವರ ಠಾಣೆಗೆ ಕರೆದುಕೊಂಡು ಬಂದು, ಆತನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸುವಾಗ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪೂರ್ಣವಾಗಿ ಪಾಲಿಸದ ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಧು ಬಿ.ಇ. ಮತ್ತು ಪ್ರಭಾರ ಠಾಣಾಧಿಕಾರಿಯಾಗಿರುವ ಹೆಡ್‌ಕಾನ್‌ಸ್ಟೇಬಲ್ ಸುಜಾತ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಇದನ್ನೂ ಓದಿ : ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲು ವಿಚಾರ – ಸ್ಪಷ್ಟನೆ ನೀಡಿದ ಸಿಎಂ ಕಚೇರಿ.. ಹೇಳಿದ್ದೇನು?

Leave a Comment

DG Ad

RELATED LATEST NEWS

Top Headlines

ಕೋವಿಡ್ ಹಗರಣದ ತನಿಖೆಗೆ SIT ರಚನೆ – ಅರೆಸ್ಟ್ ಆಗ್ತಾರಾ ಹಾರ್ಟ್ ಡಾಕ್ಟರ್ ಸಿಎನ್​ ಮಂಜುನಾಥ್?

ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ನಡೆದಿದೆ ಎನ್ನಲಾಗಿರುವ ಬಗ್ಗೆ ಈಗಾಗಲೇ ನಿವೃತ್ತ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಮಧ್ಯಂತರ ವರದಿ ನೀಡಿದ್ದು,

Live Cricket

Add Your Heading Text Here