ಬೆಂಗಳೂರು : ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದಕ್ಕೆ ಅಸಮಾಧಾನಗೊಂಡು ರಾಜೀನಾಮೆ ನೀಡಿ ಸಂಚಲನ ಸೃಷ್ಟಿಸಿದ್ದ ಸಚಿವ ರಾಮಲಿಂಗಾರೆಡ್ಡಿ ಇದೀಗ ತಮ್ಮ ಮುಂದಿನ ನಡೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ನನ್ನ ರಾಜೀನಾಮೆಯನ್ನು ಅಂಗೀಕಾರ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ನಾನು ನನ್ನ ಸ್ಪಷ್ಟ ಅಭಿಪ್ರಾಯವನ್ನು ನಾಯಕರ ಮುಂದೆ ಇಟ್ಟಿದ್ದೇನೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.
ನನಗೆ ನೀರಾವರಿ ಇಲಾಖೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ, ನಾನು ಯಾವತ್ತೂ ಜಲಸಂಪನ್ಮೂಲ ಖಾತೆಯನ್ನು ಕೇಳಿರಲಿಲ್ಲ. ಸಚಿವ ಸ್ಥಾನ ಅಥವಾ ಇಂತಹದ್ದೇ ಖಾತೆ ಬೇಕು ಎಂದು ನಾನು ಎಂದೂ ಹಠ ಹಿಡಿದವನಲ್ಲ. ಆದರೆ 2023ರಲ್ಲಿ ಮನೆಗೆ ಬಂದು ಮಾತು ಕೊಟ್ಟಂತೆ ನಾಯಕರು ನಡೆದುಕೊಳ್ಳಲಿಲ್ಲ ಎಂಬ ಬೇಸರವಷ್ಟೇ ನನಗಿದೆ. ಸುರ್ಜೇವಾಲ ಅವರು ಸಿಎಂ ಜೊತೆ ಚರ್ಚೆ ನಡೆಸುತ್ತಿದ್ದಾರೆ, ನಾಯಕರು ಏನು ತೀರ್ಮಾನ ಮಾಡುತ್ತಾರೋ ನೋಡೋಣ. ನಾನು ಯಾರ ಮೇಲೂ ಆರೋಪ ಮಾಡುವುದಿಲ್ಲ ಮತ್ತು ತಾಳ್ಮೆಯನ್ನೂ ಕಳೆದುಕೊಂಡಿಲ್ಲ ಎಂದರು.
ಇದನ್ನೂ ಓದಿ : ಸಿಇಟಿ ಫಲಿತಾಂಶ ಪ್ರಕಟ – ಮಧ್ಯಾಹ್ನ 2 ಗಂಟೆ ಬಳಿಕ ವೆಬ್‌ಸೈಟ್‌ನಲ್ಲಿ ಲಭ್ಯ!









