ಶಿವಮೊಗ್ಗ : ಚಲಿಸುತ್ತಿದ್ದ ಖಾಸಗಿ ಬಸ್ ಧಗಧಗನೆ ಹೊತ್ತಿ ಉರಿದಿರುವ ಘಟನೆ ಶಿವಮೊಗ್ಗ- ಉಡುಪಿಯ ಗಡಿಭಾಗದ ಹುಲಿಕಲ್ ಘಾಟ್ನಲ್ಲಿ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬಸ್ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಈ ಅಗ್ನಿ ಅವಘಡದಲ್ಲಿ 17 ಜನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದಂತೆ ಪ್ರಯಾಣಿಕರನ್ನ ಚಾಲಕ ಹಾಗೂ ನಿರ್ವಾಹಕ ಕೆಳಗಿಳಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಖಾಸಗಿ ಬಸ್ ಸಂಪೂರ್ಣ ಸುಟ್ಟು ಹೋಗಿದೆ. ಬಸ್ ಶಿವಮೊಗ್ಗದ ಹುಲಿಕಲ್ನಿಂದ ಉಡುಪಿಗೆ ತೆರಳುತ್ತಿತ್ತು.
ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದಿಂದ ಹುಲಿಕಲ್ ಘಾಟ್ನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ಮಾತು ತಪ್ಪಿದ್ದಕ್ಕೆ ಬೇಸರವಷ್ಟೇ – ರಾಜೀನಾಮೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ರಿಯಾಕ್ಷನ್!
Author: Btv Kannada
Post Views: 588








