Download Our App

Follow us

Home » ರಾಜ್ಯ » ಜಾರ್ಖಂಡ್​ ವಿಧಾನಸಭೆ ಚುನಾವಣೆ – 43 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ…!

ಜಾರ್ಖಂಡ್​ ವಿಧಾನಸಭೆ ಚುನಾವಣೆ – 43 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ…!

ರಾಂಚಿ : ಜಾರ್ಖಂಡ್ ರಾಜ್ಯದಲ್ಲಿ ಮೊದಲ ಹಂತದ ರಾಜಕೀಯ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು ಜಾರ್ಖಂಡ್​ನಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಎನ್‌ಡಿಎ ಮತ್ತು  ಇಂಡಿಯಾ ಮೈತ್ರಿಕೂಟಗಳ ನಡುವೆ ನೇರಾನೇರ ಸ್ಪರ್ಧೆ ನಡೆಯಲಿದೆ.

ಇಂದು ಜಾರ್ಖಂಡ್‌ನ ವಿಧಾನಸಭೆಗೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, 24 ಜಿಲ್ಲೆಗಳ ಒಟ್ಟು 81 ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನದ ಕ್ಷೇತ್ರಗಳಲ್ಲಿ 685 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನವೆಂಬರ್ 20ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, 38 ಕ್ಷೇತ್ರಗಳಲ್ಲಿ ಉಳಿದ 528 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಇಂಡಿಯಾ ಮೈತ್ರಿಕೂಟದಲ್ಲಿ ಜೆಎಂಎಂ, ಕಾಂಗ್ರೆಸ್, ಆರ್ ಜೆಡಿ ಇದೆ. ಎನ್​ಡಿಎ ಮೈತ್ರಿಕೂಟದಲ್ಲಿ ಬಿಜೆಪಿ, ಜೆಡಿಯು, ಎಲ್‌ಜೆಪಿ ಮತ್ತು ಎಜೆಎಸ್‌ಯು ಒಂದಾಗಿ ಸ್ಪರ್ಧಿಸಲಿವೆ.

ಚುನಾವಣೆಗಾಗಿ ಚುನಾವಣಾ ಆಯೋಗವು ಸಕಲ ತಯಾರಿ ನಡೆಸಿದೆ. ಜಾರ್ಖಂಡ್ ರಾಜ್ಯಾದ್ಯಂತ ಒಟ್ಟು 15,344 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 225 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳು ಎಂದು ಘೋಷಿಸಲಾಗಿದೆ. ಭದ್ರತಾ ಸುವ್ಯವಸ್ಥೆ ಕಾಪಾಡಲು 200 ಕಂಪನಿಗಳ ಭದ್ರತಾ ಪಡೆಗಳನ್ನು ನಿಯೋಜಿಸಿದೆ. ಮೊದಲ ಹಂತದಲ್ಲಿ 1 ಕೋಟಿ 37 ಲಕ್ಷ ಮಂದಿ ಮತದಾರರು ಮತ ಚಲಾಯಿಸಲಿದ್ದಾರೆ.

ಇದನ್ನೂ ಓದಿ : ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತದಾನ.. ಕಣದಲ್ಲಿ ಇರೋದ್ಯಾರು?

Leave a Comment

DG Ad

RELATED LATEST NEWS

Top Headlines

ಮಾಜಿ ಪ್ರಧಾನ ಮಂತ್ರಿ ಡಾ.ಮನಮೋಹನ್ ಸಿಂಗ್ ವಿಧಿವಶ..!

ನವದೆಹಲಿ : ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್‌ ಆಸ್ಪತ್ರೆಯ್ಲಲಿ ಇಂದು ಕೊನೆಯುಸಿರೆಳೆದಿದ್ದಾರೆ. ರಾತ್ರಿ 8

Live Cricket

Add Your Heading Text Here