ವಿಜಯಪುರ : KBJNL ಕೆನಾಲ್ ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

KBJNL ಉಪ ವಿಭಾಗ ನಂಬರ್ ಒಂದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸೇವುಲಾಲ್ ಚವ್ಹಾಣ 10 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಇನ್ನು KBJNL ಉಪ ವಿಭಾಗ ನಂಬರ್ ಒಂದರ ಕಿರಿಯ ಅಭಿಯಂತರರು 8,000 ಲಂಚಕ್ಕೆ ಬೇಡಿಕೆಯಿಟ್ಟಿದ್ದ.

3,71,419 ಮೊತ್ತದ ಕೆನಾಲ್ ಕಾಮಗಾರಿ ಬಿಲ್ ಪಾವತಿಗಾಗಿ ಇಬ್ಬರು ಅಧಿಕಾರಿಗಳು 18 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ನಾನಾಸಾಹೇಬ್ ರೂಡಗಿ ನೀಡಿದ ಖಚಿತ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಸಾಲೋಟಗಿಯಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದಿದ್ದಾರೆ.
ಬಂಧಿತ ಅಧಿಕಾರಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಸದ್ಯ ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್ – 17 ಮಂದಿ ಪ್ರಯಾಣಿಕರು ಜಸ್ಟ್ ಮಿಸ್!









