Download Our App

Follow us

Home » ಜಿಲ್ಲೆ » ಮರಕುಂಬಿ ಪರಿಶಿಷ್ಟರ ಮೇಲೆ ದೌರ್ಜನ್ಯ ಕೇಸ್ ​- ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು ಮಂಜೂರು..!

ಮರಕುಂಬಿ ಪರಿಶಿಷ್ಟರ ಮೇಲೆ ದೌರ್ಜನ್ಯ ಕೇಸ್ ​- ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು ಮಂಜೂರು..!

ಕೊಪ್ಪಳ :  ಮರಕುಂಬಿ ಪರಿಶಿಷ್ಟರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಜನ ಅಪರಾಧಿಗಳಲ್ಲಿ 97 ಮಂದಿಗೆ ಧಾರವಾಡ ಹೈಕೋರ್ಟ್ ಪೀಠ ಜಾಮೀನು ನೀಡಿದೆ. ಪ್ರಕರಣದ ಎ1 ಮಂಜುನಾಥ್​ ಜಾಮೀನಿಗೆ ಅರ್ಜಿ ಹಾಕದ ಹಿನ್ನೆಲೆಯಲ್ಲಿ ಆತನಿಗೆ ಬೇಲ್​ ಸಿಕ್ಕಿಲ್ಲ. ಪ್ರತಿಯೊಬ್ಬರಿಂದ 50 ಸಾವಿರ ರೂ. ಬೆಲೆಯ ಬಾಂಡ್ ಹಾಗೂ ಒಬ್ಬ ಶ್ಯೂರಿಟಿ ಪಡೆದು ನ್ಯಾಯಾಲಯ ಜಾಮೀನು ನೀಡಿದೆ. ಇನ್ನೂ, ಇದೇ ಪ್ರಕರಣದಲ್ಲಿ ಐದು ವರ್ಷ ಶಿಕ್ಷೆಗೆ ಗುರಿಯಾಗಿದ್ದ ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ.

2014ರ ಆಗಸ್ಟ್ 28ರಂದು ಪರಿಶಿಷ್ಟರು ಹಾಗೂ ಸವರ್ಣಿಯರ ನಡುವೆ ಗಲಾಟೆ ನಡೆದಿತ್ತು. ಇದೇ ಅಕ್ಟೋಬರ್ 28ರಂದು ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಜೀವಾವದಿ ಶಿಕ್ಷೆ ಘೋಷಣೆ ಮಾಡಿತ್ತು. ತೀರ್ಪು ಪ್ರಶ್ನಿಸಿ ಅಪರಾಧಿಗಳು ಧಾರವಾಡ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ಹೈಕೋರ್ಟ್​ ದ್ವೀಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ, ಜಮೀನು ನೀಡಿದೆ.

ಏನಿದು ಕೇಸ್​? 2014ರ ಆಗಸ್ಟ್ 28 ರಂದು ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ಮಂಜುನಾಥ ಮತ್ತು ಸ್ನೇಹಿತರು ಎಂಬುವರು ಸಿನಿಮಾ ನೋಡಲು ಗಂಗಾವತಿ ನಗರದಲ್ಲಿರುವ ಶಿವ ಚಿತ್ರಮಂದಿರಕ್ಕೆ ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್ ತೆಗೆದುಕೊಳ್ಳುವ ವಿಚಾರಕ್ಕೆ ಜಗಳ ಆರಂಭವಾಗಿತ್ತು. ಬಳಿಕ, ಮಂಜುನಾಥ್ ಮತ್ತು ಆತನ ಸ್ನೇಹಿತರು, ನಮ್ಮೂರಿನ ಪರಿಶಿಷ್ಟರು ನಮ್ಮ ಮೇಲೆ ಹಲ್ಲೆ ಮಾಡಿಸಿದ್ದಾರೆ ಅಂತ ಗ್ರಾಮದಲ್ಲಿ ಹೇಳಿದ್ದರು. ಇದು ಸವರ್ಣಿಯ ಕುಟುಂಬಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಅಂದು ಸಂಜೆ ಗ್ರಾಮದ ಸವರ್ಣಿಯರು, ಪರಿಶಿಷ್ಟರ ಕೇರಿ ಮೇಲೆ ದಾಳಿ ಮಾಡಿದ್ದರು. ಪರಿಶಿಷ್ಟರಿಗೆ ಸೇರಿದ್ದ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಅನೇಕರ ಮೇಲೆ ಸಿಕ್ಕಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿದ್ದರು. ಬೆಂಕಿ ಅವಘಡದಲ್ಲಿ ಗುಡಿಸಲುಗಳು ಸುಟ್ಟು ಭಸ್ಮವಾಗಿದ್ದವು. ಅದೃಷ್ಟವೆನ್ನುವಂತೆ ಗುಡಿಸಲುಗಳಲ್ಲಿ ಯಾರು ಇಲ್ಲದೇ ಇದ್ದಿದ್ದರಿಂದ ಅಂದು ಯಾವುದೇ ಪ್ರಾಣಾಪಾಯವಾಗಿರಲಿಲ್ಲ.

ಕೇವಲ ಬೆಂಕಿ ಹಚ್ಚಿದ್ದು ಮಾತ್ರವಲ್ಲ, ಅಂದು 27 ಪರಿಶಿಷ್ಟರ ಮೇಲೆ ಹಲ್ಲೆಯಾಗಿತ್ತು. ಈ ಬಗ್ಗೆ ಅಂದು ಘಟನೆಯಲ್ಲಿ ಗಾಯಗೊಂಡವರು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸವರ್ಣಿಯರ ವಿರುದ್ದ ಅಟ್ರಾಸಿಟಿ, ಕೊಲೆಗೆ ಯತ್ನ, ದೊಂಬಿ, ಜೀವ ಬೆದರಿಕೆ ಸೇರಿದಂತೆ ಅನೇಕ ಸೆಕ್ಷನ್​ ಅಡಿಯಲ್ಲಿ ಪ್ರಕರಣಗಳು ದಾಖಲಿಸಿದ್ದರು. 117 ಸವರ್ಣಿಯರ ಮೇಲೆ ಅಂದು ಕೇಸ್ ದಾಖಲಾಗಿತ್ತು. ಮರಕುಂಬಿ ಗ್ರಾಮದಲ್ಲಿ ಪರಿಶಿಷ್ಟರ ಮೇಲೆ ನಡೆದಿದ್ದ ದೌರ್ಜನ್ಯ, ದೇಶಾದ್ಯಂತ ಸುದ್ದಿಯಾಗಿತ್ತು. ಘಟನೆ ನಂತರ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ನಂತರ ಎಲ್ಲರೂ ಜಾಮೀನಿನ ಮೇಲೆ ಹೊರಗಿದ್ದರು. ಆದರೆ, ಕಳೆದ ಹತ್ತು ವರ್ಷಗಳಿಂದ ಪ್ರಕರಣದ ವಿಚಾರಣೆ ನಡೆಯುತ್ತಲೇ ಇತ್ತು.

ಇದನ್ನೂ ಓದಿ : ಮೆಡಿಕಲ್​ ಬೇಲ್​​ ಮೇಲಿರೋ ದರ್ಶನ್​ಗೆ ಬಿಗ್​ ಶಾಕ್ ​​​- ಮೇಲ್ಮನವಿಗೆ ಗ್ರೀನ್​ ಸಿಗ್ನಲ್​​ ಕೊಟ್ಟ ಗೃಹ ಇಲಾಖೆ..!

Leave a Comment

DG Ad

RELATED LATEST NEWS

Top Headlines

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ – ಬಾಂಬ್​ ತಯಾರಿಕೆಗೆ ISIS ನೀಡಿದ ತರಬೇತಿ ವಿವರ ಬಹಿರಂಗ..!

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸಿ ರಾಷ್ಟ್ರೀಯ ತನಿಖಾ ದಳ (NIA) ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದು, ದೋಷಾರೋಪ ಪಟ್ಟಯಿಂದ

Live Cricket

Add Your Heading Text Here