ಸಿಎಂ ಡಿಕೆಶಿ ಸೂಚನೆ ಬೆನ್ನಲ್ಲೇ ಪ್ರತಿ ಪೊಲೀಸ್ ಠಾಣೆಯಲ್ಲೂ ರೌಡಿಗಳ ನಿಗ್ರಹ ದಳ ರಚನೆಗೆ ಆದೇಶ!

ಬೆಂಗಳೂರು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ ಬೆನ್ನಲ್ಲೇ ಹೊಸದಾಗಿ ರೌಡಿ ನಿಗ್ರಹ ಪಡೆ ರಚನೆ ಮಾಡಿ ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. 

ಪ್ರತಿ ಪೊಲೀಸ್ ವಲಯ ಮತ್ತು ಠಾಣೆ ಮಟ್ಟದಲ್ಲಿ ಆ್ಯಂಟಿ ರೌಡಿ ಸ್ಕ್ವಾಡ್‌ಗಳನ್ನು ರಚಿಸಲು ಆದೇಶಿಸಲಾಗಿದೆ. ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾ ಪರಿಶೋಧಕ ಡಾ. ಎಂ.ಎ. ಸಲೀಂ ಅವರು ಆದೇಶ ಹೊರಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸಲು ಈ ಕ್ರಮಕೈಗೊಂಡಿದ್ದಾರೆ.

ಸಿಎಂ ಡಿ.ಕೆ.ಶಿವಕುಮಾರ್ ಮೊದಲ ಪತ್ರಿಕಾಗೋಷ್ಠಿಯಲ್ಲಿ ರೌಡಿಗಳನ್ನ ಹಾಗೂ ರೌಡಿ ಚಟುವಟಿಕೆಯನ್ನ ಮಟ್ಟ ಹಾಕಲು ರೌಡಿ ನಿಗ್ರಹ ದಳವನ್ನ ರಚನೆ ಮಾಡುವುದಾಗಿ ಘೋಷಣೆ ಮಾಡಿದ್ದರು. ‌ಇದೀಗ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆಯ ಮೇರೆಗೆ ರೌಡಿ ನಿಗ್ರಹ ಪಡೆಯನ್ನ ರಚಿಸಿ ಆದೇಶಿಸಲಾಗಿದೆ.

ಆದೇಶದಲ್ಲಿನ ಅಂಶಗಳು
  • ಸರ್ಕಲ್‌ ಇನ್ಸ್‌ಪೆಕ್ಟರ್‌ಗಳು ಅಥವಾ ಠಾಣಾ ಅಧಿಕಾರಿಗಳು ನಿಯಮಿತವಾಗಿ ರೌಡಿ ನಿಗ್ರಹ ದಳದ ಕಾರ್ಯಕ್ಷಮತೆ ಪರಿಶೀಲಿಸಬೇಕು.
  • ಎಸ್‌ಡಿಪಿಒಗಳು ಮತ್ತು ಎಸಿಪಿಗಳು ಮಾಸಿಕ ಅಪರಾಧ ಸಭೆಗಳಲ್ಲಿ ರೌಡಿ ನಿಗ್ರಹ ದಳದ ಕಾರ್ಯಕ್ಷಮತೆ ವಿಮರ್ಶಿಸಬೇಕು.
  • ರೌಡಿ ನಿಗ್ರಹ ದಳದ ಚಟುವಟಿಕೆಗಳ ದಾಖಲಾತಿಗಾಗಿ ಪ್ರತ್ಯೇಕ ರಿಜಿಸ್ಟರ್‌ ಇರಬೇಕು ಮತ್ತು ಮಾಸಿಕ ವರದಿಯನ್ನು ಡಿಓ ಪತ್ರದ ರೂಪದಲ್ಲಿ ಸಲ್ಲಿಸಬೇಕು.
  • ಪೊಲೀಸ್‌ ಅಧಿಕಾರಿಗಳು ರೌಡಿಗಳು ಮತ್ತು ಅಸಾಮಾಜಿಕ ಚಟುವಟಿಕೆಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಬೇಕು.
  • ಬೆದರಿಕೆ, ಬಲವಂತದಿಂದ ಹಣ ಸಂಗ್ರಹಣೆ, ಗ್ಯಾಂಗ್‌ ಚಟುವಟಿಕೆ ಅಥವಾ ಸಾರ್ವಜನಿಕ ಅಶಾಂತಿ ಕಂಡು ಬಂದರೆ ಕಾನೂನು ಪ್ರಕಾರ ತಕ್ಷಣ ಕ್ರಮ ಕೈಗೊಳ್ಳಬೇಕು.
  • ಪೊಲೀಸ್‌ ಘಟಕಾಧಿಕಾರಿಗಳು ರೌಡಿ ನಿಗ್ರಹ ದಳ ರಚಿಸಿ 7 ದಿನದಲ್ಲಿ ವರದಿ ಸಲ್ಲಿಸಬೇಕು.

ಇದನ್ನೂ ಓದಿ : ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆದಿದ್ದಾರೆ – ಸುರ್ಜೇವಾಲ!

Btv Kannada
Author: Btv Kannada

Leave a Comment

Read More