ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಚುನಾವಣೆಗೆ ಕೊನೆಗೂ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಪ್ರೊ ಎಂ.ನಾಗರಾಜ್ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ. ಹಾಗೆಯೇ, ವಿಧಾನಪರಿಷತ್ಗೆ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರಿಗೆ ಬಿಜೆಪಿ ಹೈಕಮಾಂಡ್ ವಿಧಾನಪರಿಷತ್ ಟಿಕೆಟ್ ನೀಡಿದೆ. ಹಲವು ದಿನಗಳ ಗೊಂದಲದ ಬಳಿಕ ಕೊನೆಗೂ ರಾಜ್ಯಸಭೆ ಹಾಗೂ ವಿಧಾನಪರಿಷತ್ ಅಭ್ಯರ್ಥಿಗಳ ಹೆಸರುಗಳು ಹೊರಬಿದ್ದಿವೆ.

ರಾಜ್ಯದಿಂದ ನಾಲ್ಕು ರಾಜ್ಯಸಭೆ ಸ್ಥಾನಗಳು ತೆರವಾಗಲಿವೆ. ಈ ಪೈಕಿ ಕಾಂಗ್ರೆಸ್ 3, ಬಿಜೆಪಿ 1 ಸ್ಥಾನ ಗೆಲ್ಲಲು ಅವಕಾಶ ಇದೆ. ಜೂನ್ 18ಕ್ಕೆ ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಪ್ರೊ. ಎಂ. ನಾಗರಾಜ್ ಶಿಕ್ಷಣ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿರುವ ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡರು. ಮೂಲತಃ ಹುಬ್ಬಳ್ಳಿ-ಧಾರವಾಡದವರಾದ ನಾಗರಾಜ್, ಶೈಕ್ಷಣಿಕ ವಲಯದಿಂದ ಬಂದವರಾಗಿದ್ದು, ದೀರ್ಘಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಇದನ್ನೂ ಓದಿ :ಸಿಎಂ ಡಿಕೆಶಿ ಸೂಚನೆ ಬೆನ್ನಲ್ಲೇ ಪ್ರತಿ ಪೊಲೀಸ್ ಠಾಣೆಯಲ್ಲೂ ರೌಡಿಗಳ ನಿಗ್ರಹ ದಳ ರಚನೆಗೆ ಆದೇಶ!









