ಬೆಂಗಳೂರು : ಸಚಿವ ಜಮೀರ್ ಅಹಮದ್ ಖಾನ್ಗೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಚಾಮರಾಜಪೇಟೆ ಪೊಲೀಸರು ರಾತ್ರೋರಾತ್ರಿ ಬಂಧಿಸಿದ್ದಾರೆ.
ಜಮೀರ್ ಅಹಮದ್ ಖಾನ್ ಅವರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಿದ್ದ ಹೇಳಿಕೆಗೆ ರಿಯಾಕ್ಟ್ ಮಾಡಿದ್ದ ಪುನೀತ್ ಕೆರೆಹಳ್ಳಿ ಬೇಕಾಬಿಟ್ಟಿ ಮಾತನಾಡಿದ್ದರು. ಈ ಸಂಬಂಧ ವಿಡಿಯೋವೊಂದನ್ನು ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಜಮೀರ್ ಅವರ ಬಗ್ಗೆ ‘ನಾನೇ ಕೊನೆಯಾಡುತ್ತೇನೆ’ ಎಂದು ಪ್ರಾಣ ಬೆದರಿಕೆ ಹಾಕಿ ಏಕವಚನದಲ್ಲೇ ಮಾತನಾಡಿದ್ದರು.
ಈ ಸಂಬಂಧ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸಚಿವ ಜಮೀರ್ ಅವರ ಆಪ್ತ ಸಹಾಯಕ ಬಿ. ಎಸ್. ಅಶೋಕ್ ನೀಡಿದ ದೂರು ಆಧರಿಸಿ ಬುಧವಾರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. BNS ಕಾಯ್ದೆ 2023( 299)ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಇದರ ಬೆನ್ನಲ್ಲೇ ನಿನ್ನೆ ರಾತ್ರಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿದೆ. ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಸದ್ಯ ಪುನೀತ್ ಕೆರೆಹಳ್ಳಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಇದನ್ನೂ ಓದಿ : ಬಿಗ್ಬಾಸ್ನಲ್ಲಿ ಟಾಸ್ಕ್ ವೇಳೆ ಉಂಗುರ ಕಳೆದುಕೊಂಡ ಚೈತ್ರಾ.. ಕೊರಗಜ್ಜನ ಮೊರೆ ಬಳಿಕ ಸಿಕ್ಕಿದ್ದೇಗೆ?