ಹಾವೇರಿ : ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ ಮುಗಿದ ಬೆನ್ನಲ್ಲೇ ಹಾವೇರಿಯ ಯತ್ತಿನಹಳ್ಳಿ ಗ್ರಾಮದ ಬಳಿಯ ಲೇಔಟ್ ಒಂದರಲ್ಲಿ 10 ಬ್ಯಾಲೆಟ್ ಬಾಕ್ಸ್ ಪತ್ತೆಯಾಗಿದೆ. ನಿನ್ನೆಯಷ್ಟೇ ಶಿಗ್ಗಾಂವಿ ಉಪಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್ಗಳು ಪತ್ತೆಯಾಗಿರೋದು ಸ್ಥಳೀಯರಲ್ಲಿ ಗೊಂದಲಕ್ಕೆ ಕಾರಣವಾಗಿತ್ತು.
ನಿರುಪಯುಕ್ತ ಬ್ಯಾಲೆಟ್ ಬಾಕ್ಸ್ಗಳನ್ನು ಎಪಿಎಂಸಿ ಗೋದಾಮಿನಲ್ಲಿ ಇರಿಸಲಾಗಿತ್ತು. ಕಿಡಿಗೇಡಿಗಳು ಬಾಕ್ಸ್ ಗಳನ್ನು ಮಾರುವ ಉದ್ದೇಶದಿಂದ ಕಳ್ಳತನ ಮಾಡಿದ್ದ ಶಂಕೆ ಇದೆ. 10 ಬಾಕ್ಸ್ ಸಾಗಿಸಲಾಗದೇ ಲೇಔಟ್ನ ಕಾಲುವೆಯಲ್ಲಿ ಬಾಕ್ಸ್ ಇಟ್ಟು ಹೋಗಿದ್ದರು. ಗೋದಾಮಿಗೆ ಪೊಲೀಸರು, ಹಾವೇರಿ ತಹಶೀಲ್ದಾರ್ ಶರಣಮ್ಮ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು.
ಪೊಲೀಸರೂ ದೂರು ಪಡೆದು ತನಿಖೆ ಮಾಡಿದ್ದರು. ಶಿಗ್ಗಾಂವಿ ಉಪಚುನಾವಣೆಗೂ ಈ ಬಾಕ್ಸ್ಗಳಿಗೂ ಸಂಬಂಧ ಇಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎಲೆಕ್ಷನ್ಗೆ EVM ಬಳಸಲಾಗಿದೆ. ಇವು ಹಳೆಯ ಬ್ಯಾಲೆಟ್ ಬಾಕ್ಸ್ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ನಿಮ್ಮದೇ ಸರ್ಕಾರ, ತನಿಖಾ ಸಂಸ್ಥೆಗಳಿವೆ.. 50 ಕೋಟಿ ಆಮಿಷದ ಮೂಲ ತಿಳಿಸಿ – ಸಿಎಂಗೆ ವಿಜಯೇಂದ್ರ ಟಾಂಗ್..!