Download Our App

Follow us

Home » ರಾಜ್ಯ » ರಾಜ್ಯದ ಹಲವೆಡೆ ಇಂದಿನಿಂದ 3 ದಿನ ಮಿಂಚು-ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ..!

ರಾಜ್ಯದ ಹಲವೆಡೆ ಇಂದಿನಿಂದ 3 ದಿನ ಮಿಂಚು-ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ..!

ಬೆಂಗಳೂರು : ಇಂದಿನಿಂದ ನ.17ರ ವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಲ್ಲಿ ಮಿಂಚು, ಗುಡುಗು, ಬಿರುಗಾಳಿ ಸಹಿತ ಸಾಧಾರಣ ಮಳೆಯಾಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಚಿಕ್ಕಬಳ್ಳಾಪುರದಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಸಿಲಿಕಾನ್ ಸಿಟಿಯಲ್ಲಿ ಸಂಜೆ ಸಮಯದಲ್ಲಿ ಮೋಡಕವಿದ ವಾತವರಣವಿರಲಿದೆ. ಇನ್ನು ಬೆಂಗಳೂರಿನ ಹಲವೆಡೆ ಇಂದು ಸಂಜೆ ಹೊತ್ತಿಗೆ ಮಳೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇನ್ನು ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ದಾವಣಗೆರೆ, ತುಮಕೂರಿನಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗ ಸಹಿತ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಸುಮಾರು 30-40ಕಿಮಿ. ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರಕನ್ನಡ ಜಿಲ್ಲೆಯ ಹಲವು ಸ್ಥಳಗಲ್ಲಿ ಮಳೆ ಮುನ್ಸುಚನೆ ನೀಡಲಾಗಿದೆ.

ಇದನ್ನೂ ಓದಿ : ರಾಜಕಾರಣಿಗಳಿಗೆ ಏಡ್ಸ್ ಇಂಜೆಕ್ಷನ್ ಚುಚ್ಚಲು ಮಾಸ್ಟರ್ ಪ್ಲಾನ್ ಕೊಟ್ಟಿದ್ದ ಕ್ರಿಮಿನಲ್ ಇನ್ಸ್​ಪೆಕ್ಟರ್ ಅಯ್ಯಣ್ಣ ರೆಡ್ಡಿಗೆ SIT ಡ್ರಿಲ್​..!

Leave a Comment

DG Ad

RELATED LATEST NEWS

Top Headlines

ಕೊಲೆ ಆರೋಪಿ ದರ್ಶನ್​​ಗೆ ಬಿಗ್​​ ​ಶಾಕ್.. ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಿದ್ಧತೆ..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದ ನಟ ದರ್ಶನ್​ ಮೆಡಿಕಲ್ ಗ್ರೌಂಡ್ಸ್​ನಲ್ಲಿ ಮಧ್ಯಂತರ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ನಟನಿಗೆ ಕೆಂಗೇರಿ ಬಿಜಿಎಸ್

Live Cricket

Add Your Heading Text Here