ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಮೆಡಿಕಲ್ ಗ್ರೌಂಡ್ಸ್ನಲ್ಲಿ ಮಧ್ಯಂತರ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ನಟನಿಗೆ ಕೆಂಗೇರಿ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ನಡುವೆ ಕೊಲೆ ಆರೋಪಿ ದರ್ಶನ್ಗೆ ಬಿಗ್ ಶಾಕ್ ಎದುರುರಾಗಿದೆ.
ಆರೋಪಿ ದರ್ಶನಿಗೆ ಮಧ್ಯಂತರ ಜಾಮೀನು ಮಂಜೂರು ಆದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ಕೂಡ ಅನುಮತಿ ನೀಡಿದ್ದು, ಹಾಗಾಗಿ ಇದೀಗ ಪೊಲೀಸರು ದರ್ಶನ್ ಮಧ್ಯಂತರ ಜಾಮೀನು ರದ್ದು ಪಡಿಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದಾರೆ. ಸದ್ಯದಲ್ಲೇ ಪೊಲೀಸರು ಸುಪ್ರೀಂಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ಕಮಿಷನರ್ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.
ಅನಾರೋಗ್ಯದ ಕಾರಣಕ್ಕಾಗಿ ದರ್ಶನ್ ಅವರಿಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿತ್ತು. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಎರಡು ವಾರಗಳೇ ಕಳೆದು ಹೋಗಿವೆ. ಆದ್ರೂ ದರ್ಶನ್ ಆಪರೇಷನ್ ಬಗ್ಗೆ ತೀರ್ಮಾನ ಆಗಿಲ್ಲ. ಹೀಗಾಗಿ ಎರಡು ವಾರದಿಂದಲೂ ದರ್ಶನ್ ಚಲನವಲನದ ಮೇಲೆ ಕಣ್ಣಿಟ್ಟಿರುವ ಪೊಲೀಸರು, ಕಾನೂನು ತಜ್ಞರ ಸಲಹೆ ಮೇರೆಗೆ ಬೇಲ್ ಕ್ಯಾನ್ಸಲ್ಗೆ ಸೂಕ್ತವಾದ ಕಾರಣ ಲಗತ್ತಿಸಿ ಮೇಲ್ಮನವಿ ಸಲ್ಲಿಕೆ ಮಾಡಲಿದ್ದಾರೆ.
ಇದನ್ನೂ ಓದಿ : ರಾಜ್ಯದ 7 IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ..!