ಬೆಂಗಳೂರು : ಉಪಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಆಪರೇಷನ್ ಕಮಲ ಮತ್ತೊಮ್ಮೆ ಸದ್ದು ಮಾಡಿತ್ತು. ಖುದ್ದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ರಮೇಶ್ ಬಂಡಿ ಸಿದ್ದೇಗೌಡ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿ ಸಿದ್ದೇಗೌಡ ಅವರು, ಕಾಂಗ್ರೆಸ್ ಶಾಸಕರನ್ನ ಖರೀದಿಸೋಕೆ ಆಗಲ್ಲ. ಬಿಜೆಪಿ, ಜೆಡಿಎಸ್ ಪ್ರಯತ್ನ ಫಲಿಸಲ್ಲ ಎಂದು ತಿಳಿಸಿದ್ದಾರೆ.
ಒಬ್ಬರಿಗೆ ಸರ್ಕಾರ ಬೀಳಿಸಿ ಅನುಭವ ಇದೆ. ಇನ್ನೊಬ್ಬರಿಗೆ ಸರ್ಕಾರ ಬೀಳಿಸಲು ಪ್ರಯತ್ನಿಸಿ ಅನುಭವ ಇದೆ. ಕಾಂಗ್ರೆಸ್ 136 ಶಾಸಕರು ಭದ್ರವಾಗಿದ್ದೇವೆ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿ ಸಿದ್ದೇಗೌಡ ತಿಳಿಸಿದ್ದಾರೆ.
ಇದನ್ನೂ ಓದಿ : ರಾಜ್ಯದ 7 IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ..!
Post Views: 41