ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿದೆ. ರೈತರ ಜಮೀನಿಗೆ ನೋಟಿಸ್ ನೀಡುತ್ತಿರುವ ಸರ್ಕಾರದ ವಿರುದ್ದ ನ. 25 ರಿಂದ ಡಿ. 25ರವರೆಗೆ ರಾಜ್ಯಾದ್ಯಂತ ಜನ ಜಾಗೃತಿ ಅಭಿಯಾನ ನಡೆಸಲು ಯತ್ನಾಳ್ ಟೀಂ ಸಜ್ಜಾಗಿದೆ.
ಈ ವಿಚಾರವಾಗಿ ಬೆಂಗಳೂರಿನಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬಿಜೆಪಿ ಅತೃಪ್ತರು, ವಕ್ಫ್ ವಿಚಾರದಲ್ಲಿ ಅನೇಕ ದೂರುಗಳು ಬಂದಿವೆ. ವಕ್ಪ್ ಸಮಸ್ಯೆ ಎದುರಾಗಿರುವವರಿಗೆ ಮಾಹಿತಿ ನೀಡಲು ವಾರ್ ರೂಂ ಸ್ಥಾಪನೆ ಮಾಡುತ್ತಿದ್ದೇವೆ. ಬಿಜೆಪಿ ನೇತೃತ್ವದಲ್ಲೇ ಹೋರಾಟ ಮಾಡುತ್ತೇವೆ.
ನವೆಂಬರ್ 25ರಂದು ಬೀದರ್ನಿಂದ ಕಲಬುರ್ಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ , ಬೆಳಗಾವಿ ಸೇರಿ ಹಲವು ಭಾಗಗಳಲ್ಲಿ ಜನ ಜಾಗೃತಿ ಅಭಿಯಾನ ನಡೆಸಲಿದ್ದೇವೆ. ಇನ್ನು ನಮ್ಮದು ಬಿಜೆಪಿಯಿಂದಲೇ ನಡೆಯುತ್ತಿರುವ ಹೋರಾಟ ಆಗಿದ್ದು, ವಿಜಯೇಂದ್ರ ಸೇರಿದಂತೆ ಯಾರಾದ್ರೂ ಬರಬಹುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಕೊಲೆ ಆರೋಪಿ ದರ್ಶನ್ಗೆ ಬಿಗ್ ಶಾಕ್.. ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಿದ್ಧತೆ..!