ತಮಿಳುನಾಡು ಸಿಎಂ ದಳಪತಿ ವಿಜಯ್ ಅವರು ಭಾರತದ ಚೆಸ್ ಮಾಸ್ಟರ್ ಆರ್. ಪ್ರಜ್ಞಾನಂದ ಅವರನ್ನು ಸನ್ಮಾನಿಸಿ, ನಾರ್ವೆ ಚೆಸ್ 2026 ಚಾಂಪಿಯನ್ ಆದ ಗೌರವಾರ್ಥವಾಗಿ 50 ಲಕ್ಷ ರೂಪಾಯಿ ಬಹುಮಾನ ನೀಡಿದ್ದಾರೆ.
ಈ ವೇಳೆ ವಿಜಯ್ ಅವರು ಪ್ರಜ್ಞಾನಂದ ಜೊತೆ ಚೆಸ್ ಆಡಿದ್ದು, ಪ್ರಜ್ಞಾನಂದ ಅವರ ಅನುಭವವನ್ನು ಹಂಚಿಕೊಂಡಿದ್ದಾರೆ.
ಕಳೆದ ವಾರ ನಡೆದ ಓಸ್ಲೋದಲ್ಲಿ ನಡೆದ ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಅಂತಿಮ ಸುತ್ತಿನ ರೋಚಕ ಪಂದ್ಯದಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಪ್ರಜ್ಞಾನಂದ ಭರ್ಜರಿ ಜಯ ಸಾಧಿಸಿ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಇದನ್ನೂ ಓದಿ : ಕೆಂಪೇಗೌಡ ಏರ್ಪೋರ್ಟ್ನಲ್ಲಿ ಭರ್ಜರಿ ಕಾರ್ಯಾಚರಣೆ – 5.90 ಕೋಟಿ ಮೌಲ್ಯದ ಗಾಂಜಾ ಜಪ್ತಿ!
Author: Btv Kannada
Post Views: 757









