ಬೆಂಗಳೂರು : ರಾಜ್ಯ ಸರ್ಕಾರವು ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ಗಳನ್ನು ನೀಡಲು ನಿರ್ಧರಿಸಿದೆ. ಶೀಘ್ರದಲ್ಲೇ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಯಾಗಲಿದ್ದು, ಈ ಹೊಸ ವ್ಯವಸ್ಥೆ ಜಾರಿಗೆ ಬಂದ ಬಳಿಕ ಬಸ್ ಪ್ರಯಾಣದ ವೇಳೆ ಆಧಾರ್ ಕಾರ್ಡ್ ತೋರಿಸುವ ತೊಂದರೆ ತಪ್ಪಲಿದೆ.
ರಾಜ್ಯದ ಮೂರು ಕೋಟಿಗೂ ಹೆಚ್ಚು ಮಹಿಳಾ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ಗಳನ್ನು ಸರ್ಕಾರ ವಿತರಿಸಲಿದ್ದು, ಇದರಿಂದ ದಿನನಿತ್ಯ ನಿರ್ವಾಹಕರಿಗೆ ಭೌತಿಕ ಗುರುತಿನ ಚೀಟಿ ತೋರಿಸುವ ಗೊಂದಲಗಳು ನಿವಾರಣೆಯಾಗಲಿದೆ.
ಅಧಿಕಾರ ಸ್ವೀಕರಿಸಿದ ಬಳಿಕ ಬೈರತಿ ಸುರೇಶ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಈ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸುವ ಉದ್ದೇಶದಿಂದ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಹೇಳಿದರು.
ರಾಜ್ಯದ ಮೂರು ಕೋಟಿಗೂ ಅಧಿಕ ಜನರಿಗೆ ಈ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಮಹಿಳೆಯರಿಗೆ ಈ ಸ್ಮಾರ್ಟ್ ಕಾರ್ಡ್ಗಳನ್ನು ಉಚಿತವಾಗಿ ನೀಡಲಾಗುತ್ತದೆ. ಪುರುಷರು ಮೆಟ್ರೋ ಕಾರ್ಡ್ ಮಾದರಿಯಲ್ಲಿ ಶುಲ್ಕ ಪಾವತಿಸಿ ಕಾರ್ಡ್ ಪಡೆಯಬಹುದಾಗಿದೆ. ಕಾರ್ಡ್ನಲ್ಲಿರುವ ಮೊತ್ತ ಮುಗಿದ ಬಳಿಕ ಮರುರಿಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯೂ ಇರಲಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ : “ನಮ್ಮ ರೇಂಜ್ ರೋವರ್” ಚಿತ್ರದ ಟೀಸರ್, ಹಾಡುಗಳು ಬಿಡುಗಡೆ!









