ಮಂಗಳೂರು : ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕ ಕಿರುಕುಳ ನೀಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಹೀಗಾಗಿ ಉದ್ರಿಕ್ತರಿಂದ ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಗರ ಠಾಣೆ ಎದುರು ನಿನ್ನೆ ರಾತ್ರಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಪುತ್ತೂರು ಕಂಬಳ ವೀಕ್ಷಿಸಲು ತೆರಳುತ್ತಿದ್ದ ವೇಳೆ ಕಡಬ ಮೂಲದ ಶಾಕೀರ್ ಎಂಬಾತ ಬಾಲಕಿಗೆ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಆರೋಪಿ ಶಾಕೀರ್ನನ್ನ ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ಆಕ್ರೋಶಗೊಂಡಿರುವ ಹಿಂದೂ ಕಾರ್ಯಕರ್ತರು ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಿ ಆರೋಪಿ ಶಾಕೀರ್ನನ್ನು ತಮಗೆ ಒಪ್ಪಿಸುವಂತೆ ಒತ್ತಾಯಿಸಿದ್ದಾರೆ.
ಠಾಣೆಯ ಎದುರು ನೂರಾರು ಹಿಂದೂ ಕಾರ್ಯಕರ್ತರು ಜಮಾವಣೆಯಾಗಿದ್ದರು.. ಹಿಂದೂ ಮುಖಂಡ ಅರುಣ್ ಪುತ್ತಿಲ ಸ್ಥಳಕ್ಕಾಗಮಿಸಿ ಯುವಕರ ಸಮಾಧಾನ ಪಡಿಸಿದರು. ಸದ್ಯ ಆರೋಪಿ ಶಾಕೀರ್ನನ್ನು ಬಂಧಿಸಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಗುಂಪು ಚದುರಿಸಿದ್ದಾರೆ.
ಇದನ್ನೂ ಓದಿ : ಕುತೂಹಲ ಮೂಡಿಸಿದ ಡಿಕೆ.ಶಿವಕುಮಾರ್- ಸೂರಜ್ ರೇವಣ್ಣ ಭೇಟಿ..!