ಬೆಂಗಳೂರು : ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಫಲಿತಾಂಶ ಎಲ್ಲರ ಕುತೂಹಲ ಕೆರಳಿಸಿದ್ದು, ಸಿ.ಪಿ ಯೋಗೇಶ್ವರ್ ಮತ್ತು ನಿಖಿಲ್ ಕುಮಾರಸ್ವಾಮಿ ನಡುವೆ ಟಫ್ ಫೈಟ್ ಏರ್ಪಟ್ಟಿತ್ತು. ಇಬ್ಬರು ಅಭ್ಯರ್ಥಿಗಳ ನಡುವಿನ ತೀವ್ರ ಪೈಪೋಟಿ ನಡೆದಿದ್ದು, ಇದೀಗ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ 25 ಸಾವಿರಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೆ ಬಾಕಿ ಉಳಿದಿದೆ. ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಜಂಪ್ ಆದರೂ ಜನತೆ ಯೋಗೇಶ್ವರ್ ಕೈ ಹಿಡಿದಿದ್ದಾರೆ. ಮೊದಲ 6 ಸುತ್ತಿನಲ್ಲಿ ನಿಖಿಲ್ ಮುನ್ನಡೆಯಲ್ಲಿದ್ದರು. ಆದರೆ ಚನ್ನಪಟ್ಟಣ ನಗರದ ಇವಿಎಂ ಓಪನ್ ಆಗುತ್ತಿದ್ದಂತೆ ಯೋಗೇಶ್ವರ್ ಅವರಿಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು. ಈ ಮುನ್ನಡೆಯನ್ನು ಯೋಗೇಶ್ವರ್ ಕೊನೆಯವರೆಗೂ ಉಳಿಸಿಕೊಂಡು ಬಂದರು.
ಯೋಗೇಶ್ವರ್‌ಗೆ 2 ಬಾರಿ ಸೋಲಿನ ಅನುಕಂಪ ಕೈ ಹಿಡಿದಿದೆ. ಎರಡು ಬಾರಿ ಶಾಸಕರಾಗಿ ಕುಮಾರಸ್ವಾಮಿ ಕ್ಷೇತ್ರಕ್ಕೆ ಬರಲಿಲ್ಲ ಎಂಬ ಬೇಸರ ಇತ್ತು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸೋಲಿನ ನಂತರ ಡಿಕೆ ಬ್ರದರ್ಸ್ ಚನ್ನಪಟ್ಟಣವನ್ನು ಪ್ರತಿಷ್ಟೆಯಾಗಿ ತಗೆದುಕೊಂಡಿದ್ದರು. ಚುನಾವಣೆಗೆ 4 ತಿಂಗಳು ಮೊದಲೇ ಡಿಸಿಎಂ ಡಿಕೆ ಶಿವಕುಮಾರ್ ಜನತಾ ದರ್ಶನ ಆರಂಭಿಸಿದ್ದರು. ಕಳೆದ ಬಾರಿ ಯೋಗೇಶ್ವರ್‌ಗೆ ಮಿಸ್ ಆಗಿದ್ದ ಅಲ್ಪ ಸಂಖ್ಯಾತ ಮತಗಳು ಈ ಬಾರಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಕೈ ಹಿಡಿದಿದೆ.
- 99,320 ಮತಗಳನ್ನು ಪಡೆದ ಯೋಗೇಶ್ವರ್
- ನಿಖಿಲ್ ಕುಮಾರಸ್ವಾಮಿಗೆ 73, 417 ಮತ
ಇದನ್ನೂ ಓದಿ : ಈ ವಾರ ಬಿಗ್ಬಾಸ್ ಮನೆಯಿಂದ ಆಚೆ ಬರೋದು ಯಾರು?