ಬೆಂಗಳೂರು : ಮೈಸೂರು ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಡಿಸೆಂಬರ್ 10ಕ್ಕೆ ಮುಂದೂಡಿದೆ.
ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ನ್ಯಾ.ನಾಗಪ್ರಸನ್ನ ಅವರಿದ್ಧ ಪೀಠ ಡಿಸೆಂಬರ್ 10ಕ್ಕೆ ಮುಂದೂಡಿದೆ. ಡಿಸೆಂಬರ್ 10ರಂದೇ ವಾದ ಪ್ರತಿವಾದ ಮುಗಿಸಲು ಸೂಚನೆ ನೀಡಿದೆ.
ಈ ನಡುವೆ ಇಂದು ಲೋಕಾಯುಕ್ತ ಅಧಿಕಾರಿಗಳು ತನಿಖಾ ವರದಿ ಸಲ್ಲಿಕೆ ಮಾಡಿಲ್ಲ ಎನ್ನಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದು, ಸುಮಾರು 400 ಕ್ಕೂ ಹೆಚ್ಚು ಪುಟಗಳ ವರದಿ ಸಲ್ಲಿಕೆಗೆ ಮುಂದಾಗಿದ್ದಾರೆ.
ಇದನ್ನೂ ಓದಿ : ನೆಲಮಂಗಲದಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ..!
Post Views: 27