ನಾನು ಸತ್ತಿಲ್ಲ ಆರಾಮಾಗಿದ್ದೇನೆ – ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿರುವ ಸುದ್ದಿ ಬಗ್ಗೆ ದೊಡ್ಡಣ್ಣ ಸ್ಪಷ್ಟನೆ!

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಇನ್ನಿಲ್ಲ ಎನ್ನುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದೀಗ ಈ ಸುದ್ದಿ ಬಗ್ಗೆ ಸ್ವತಃ ದೊಡ್ಡಣ್ಣ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಶ್ರದ್ಧಾಂಜಲಿಯ ಪೋಸ್ಟರ್ ಸಂಪೂರ್ಣವಾಗಿ ನಕಲಿ ಮತ್ತು ಎಡಿಟೆಡ್ ಆಗಿದ್ದು, ನಾನು ಆರೋಗ್ಯವಾಗಿದ್ದೇನೆ, ಇಂತಹ ಸುಳ್ಳು ಸುದ್ದಿಗಳನ್ನು ಯಾರೂ ನಂಬಬೇಡಿ ಮತ್ತು ಶೇರ್ ಮಾಡಬೇಡಿ ಎಂದು ದೊಡ್ಡಣ್ಣ ಅವರು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂಬ ಭಾವಪೂರ್ಣ ಶ್ರದ್ಧಾಂಜಲಿಯ ಪೋಸ್ಟರ್ ಮತ್ತು ಪೋಸ್ಟ್‌ಗಳು ಫೇಸ್‌ಬುಕ್ ಸೇರಿದಂತೆ ಹಲವು ಕಡೆ ಭಾರಿ ವೈರಲ್ ಆಗಿದ್ದವು. ಇದನ್ನು ನೋಡಿ ಅವರ ಅಭಿಮಾನಿಗಳು ಹಾಗೂ ಆತ್ಮೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಇದೀಗ ಈ ಸುದ್ದಿಯನ್ನು ಹಬ್ಬಿಸಿದವರ ವಿರುದ್ಧ ನಟ ದೊಡ್ಡಣ್ಣ ಸಿಟ್ಟಾಗಿದ್ದಾರೆ. ಕಿಡಿಗೇಡಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಇರಾನ್ ಮೇಲಿನ ದಾಳಿ ರದ್ದುಗೊಳಿಸಿದ ಡೊನಾಲ್ಡ್ ಟ್ರಂಪ್ – ಶೀಘ್ರದಲ್ಲೇ ಶಾಂತಿ ಒಪ್ಪಂದ!

Btv Kannada
Author: Btv Kannada

Leave a Comment

Read More