ಪಾಕಿಸ್ತಾನದಲ್ಲಿ ಮಾಜಿ ಪ್ರಧಾನಿ ಹಾಗೂ ಪಿಟಿಐ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಬಿಡುಗಡೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಹಿಂಸಾಚಾರದಲ್ಲಿ ಒಟ್ಟು 12ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು 100ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.
ಹೀಗಾಗಿ ಕಂಡಲ್ಲಿ ಗುಂಡು ಆದೇಶ ಮಾಡಲಾಗಿದೆ. ಇಮ್ರಾನ್ ಖಾನ್ ಬೆಂಬಲಿಗರ ಪ್ರತಿಭಟನೆಗೆ ಶೆಹಬಾಜ್ ಷರೀಫ್ ನೇತೃತ್ವದ ಸರ್ಕಾರ ಬೆಚ್ಚಿ ಬಿದ್ದಿದೆ. ರಾಜಧಾನಿ ಇಸ್ಲಾಮಾಬಾದ್‌ಗೆ ನುಗ್ಗಲು ಇಮ್ರಾನ್ ಖಾನ್ ಅವರ ಸಾವಿರಾರು ಬೆಂಬಲಿಗರ ಯತ್ನಿಸಿದ್ದರು. ಪರಿಸ್ಥಿತಿ ಹತೋಟಿಗೆ ತರಲು ಪಾಕ್ ಸೇನೆ ಹರಸಾಹಸ ಮಾಡ್ತಿತ್ತು. ಇಸ್ಲಾಮಾಬಾದ್‌ನಲ್ಲಿ ಲಾಕ್‌ಡೌನ್ ಘೋಷಿಸಲಾಗಿದೆ. ಇಮ್ರಾನ್ ಖಾನ್ ಪತ್ನಿ ಬುಷ್ರಾ ಬೀಬಿ ಹೋರಾಟದ ನೇತೃತ್ವ ವಹಿಸಿದ್ದಾರೆ. ಇನ್ನು ಇಮ್ರಾನ್ ಖಾನ್ ಮೇಲೆ ಭ್ರಷ್ಟಾಚಾರ ಸೇರಿ 200ಕ್ಕೂ ಹೆಚ್ಚು ಪ್ರಕರಣಗಳಿವೆ.
ಇಸ್ಲಾಮಾಬಾದ್‌ನ ಬೀದಿ ಬೀದಿಗಳಲ್ಲಿ ಪ್ರತಿಭಟನಾಕಾರರು ಕಲ್ಲು, ಕೋಲು ಮತ್ತು ಕವಣೆಗಳನ್ನು ಹಿಡಿದುಕೊಂಡು ಬೀದಿಗೆ ಇಳಿದಿದ್ದಾರೆ. 2018ರಿಂದ 2022ರವರೆಗೆ ಪಾಕಿಸ್ತಾನದ ಪ್ರಧಾನಿಯಾಗಿದ್ದ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್‌ಗೆ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಿದ್ದು, ಜೈಲು ಶಿಕ್ಷೆ ನೀಡಲಾಗಿದೆ. ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಅಪಾರ ಬೆಂಬಲಿಗರನ್ನು ಹೊಂದಿದ್ದರೂ, ಅವರನ್ನು ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧಿಸಲಾಗಿದೆ.
ವಂಚನೆ ಮತ್ತು ಭ್ರಷ್ಟಾಚಾರ, ವಿಧ್ವಂಸಕ ಕೃತ್ಯ ಸೇರಿದಂತೆ ಹಲವು ಆರೋಪಗಳನ್ನು ಹೊರಿಸಲಾಗಿದ್ದು ಹಲವು ಕಾನೂನು ಮೊಕದ್ದಮೆಗಳನ್ನು ಹಾಕಲಾಗಿದೆ. ದೇಶದ್ರೋಹ ಆರೋಪವನ್ನೂ ಕೂಡ ಹೊರಿಸಲಾಗಿದ್ದು, ಅವರು ರಾಜಕೀಯದಂತೆ ಬರದಂತೆ ತಡೆಯಲು ಬಂಧಿಸಲಾಗಿದೆ ಎಂದು ಬೆಂಬಲಿಗರು ಆಕ್ರೋಶಗೊಂಡಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ಗೆ ಹೋಗಲು ನಾವು ಹಸಿದು ಕೂತಿಲ್ಲ – ಶಾಸಕ ಯೋಗೇಶ್ವರ್ಗೆ ಬಂಡೆಪ್ಪ ಕಾಶೆಂಪೂರ್ ತಿರುಗೇಟು..!