ಶಿವಮೊಗ್ಗ: ಮಳೆಗಾಲದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾಧಿಕಾರಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ-ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಓಡಾಟ ಹೆಚ್ಚಾದರೆ ರಸ್ತೆ ಬದಿಯ ಭೂಕುಸಿತ ಸಂಭವಿಸುವ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುವ ಅಪಾಯವಿದೆ. ಮತ್ತೊಂದು ಪ್ರಮುಖ ಸಂಪರ್ಕ ರಸ್ತೆಯಾದ ಹುಲಿಕಲ್ ಘಾಟಿಯಲ್ಲೂ ಭೂಕುಸಿತ ಸಂಭವಿಸಿದ್ದು, ಅಲ್ಲಿನ ತಾತ್ಕಾಲಿಕ ರಕ್ಷಣಾತ್ಮಕ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ.
ಆಗುಂಬೆ ಘಾಟಿ ಮಾರ್ಗವು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಉಡುಪಿ, ಮಂಗಳೂರು ಹಾಗೂ ಮಣಿಪಾಲ್ ಆಸ್ಪತ್ರೆಗಳಿಗೆ ತುರ್ತು ಚಿಕಿತ್ಸೆಗೆ ತೆರಳಲು ಪ್ರಮುಖ ಸಂಪರ್ಕವಾಗಿದೆ. ಇದೀಗ ಈ ಆದೇಶದಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಜಿಲ್ಲಾಡಳಿತವು ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ.
ಇದನ್ನೂ ಓದಿ : ನಾನು ಸತ್ತಿಲ್ಲ ಆರಾಮಾಗಿದ್ದೇನೆ – ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿರುವ ಸುದ್ದಿ ಬಗ್ಗೆ ದೊಡ್ಡಣ್ಣ ಸ್ಪಷ್ಟನೆ!








