“ಮಹಾನ್” ಚಿತ್ರದಲ್ಲಿ ಸ್ಯಾಂಡಲ್​ವುಡ್​ನ ಮಹಾನ್ ನಟರ ಅಭಿನಯ!

ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ, ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ “ಮಹಾನ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ವಿಜಯ ರಾಘವೇಂದ್ರ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ.

“ಮಹಾನ್” ರೈತರ ಕಥೆಯಾಗಿದ್ದು, ಈ ಚಿತ್ರದ ಪ್ರತಿಯೊಂದು ಪಾತ್ರವು ಬಹಳ ಮುಖ್ಯ ಎನಿಸುತ್ತದೆ. ಇಂತಹ ಅಪರೂಪದ ಕಥಾಹಂದರ ಹೊಂದಿರುವ ನಮ್ಮ “ಮಹಾನ್” ಚಿತ್ರದಲ್ಲಿ ಕನ್ನಡ ಚಿತ್ರರಂಗದ “ಮಹಾನ್” ಕಲಾವಿದರಾದ ಡೈನಾಮಿಕ್ ಸ್ಟಾರ್ ದೇವರಾಜ್, ಶರತ್ ಲೋಹಿತಾಶ್ವ, ರಮೇಶ್ ಭಟ್, ಅವಿನಾಶ್, ರಂಗಾಯಣ ರಘು ಹಾಗೂ ರಮೇಶ್ ಇಂದಿರಾ ಅಭಿನಯಿಸಿದ್ದಾರೆ. ಇವರೆಲ್ಲರ ಪಾತ್ರವೂ ನೋಡುಗನ ಮನದಲ್ಲಿ ಉಳಿಯುವಂತ ಪಾತ್ರಗಳಾಗಿದೆ. ಇಂತಹ ಅನುಭವಿ ಕಲಾವಿದರು ನಮ್ಮ ಚಿತ್ರದಲ್ಲಿ ನಟಿಸಿರುವುದು ಬಹಳ ಹೆಮ್ಮೆ.

ಇದೊಂದು ಬಹು ತಾರಾಬಳಗದ ಚಿತ್ರವಾಗಿದ್ದು, ರಾಧಿಕಾ ನಾರಾಯಣ್, ಮಿತ್ರ, ನಮ್ರತಾ ಗೌಡ, ವರ್ಷ ಬೊಳ್ಳಮ್ಮ, ಕಿರಣ್ ಶ್ರೀನಿವಾಸ್ ಸಹ ಆಭಿನಯಿಸಿದ್ದಾರೆ. ವಿಜಯ ರಾಘವೇಂದ್ರ ಅವರು ರೈತನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ : ಪೋಕ್ಸೋ ಕೇಸ್ – ವಚನಾನಂದ ಸ್ವಾಮೀಜಿ ವಿರುದ್ಧ 410 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ!

Btv Kannada
Author: Btv Kannada

Leave a Comment

Read More