ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಇಂದು ಉಡುಪಿಯ ಪ್ರಸಿದ್ಧ ಮೂಕಾಂಬಿಕೆ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ತಮಿಳುನಾಡು ಸಿಎಂ ವಿಜಯ್ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಹೂಗುಚ್ಛ ನೀಡಿ ಸ್ವಾಗತ ಕೋರಿದರು. ವಿಜಯ್ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್ ಸುಮಾರು ಅರ್ಧ ಗಂಟೆಗಳ ಕಾಲ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಾಯಿಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗವನ್ನ ಕಾಣಿಕೆಯಾಗಿ ಅರ್ಪಿಸಿದ್ದಾರೆ.
ಇಂದು ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್ ಅವರು, ಅಲ್ಲಿಂದ ಕಾರಿನಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.
ಇದನ್ನೂ ಓದಿ : ಪಶ್ಚಿಮ ಬಂಗಾಳದಲ್ಲಿ ಅಗ್ನಿ ಅವಘಡ – 4,000 ಇವಿಎಂ ಭಸ್ಮ.. ಅವಘಡದ ಹಿಂದೆ ಅಡಗಿದೆಯೇ ರಹಸ್ಯ?
Author: Btv Kannada
Post Views: 728









