ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ಅಪಘಾತ – ಯುವತಿ ಸ್ಥಳದಲ್ಲೇ ಸಾವು!

ಬೆಂಗಳೂರು : ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ ನಡೆದಿದೆ.

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಬೆಂಜ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. 

ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

ಇದನ್ನೂ ಓದಿ : ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

Btv Kannada
Author: Btv Kannada

Leave a Comment

Read More