ಮಂಡ್ಯ : ಹೆದ್ದಾರಿಯಲ್ಲೇ ಸ್ಲೀಪರ್ ಬಸ್ ಹೊತ್ತಿ ಉರಿದ ಘಟನೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ನಡೆದಿದೆ. ಉಡುಪಿಯಿಂದ-ಬೆಂಗಳೂರಿಗೆ 25 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೇಷ್ಮಾ ಟ್ರಾವೆಲ್ಸ್ ಸ್ಲೀಪರ್ ಬಸ್ನಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕ ಪ್ರಯಾಣಿಕರನ್ನ ಬಸ್ನಿಂದ ಕೆಳಗಿಳಿಸಿದ್ದಾರೆ. ಬಸ್ ನಿಲ್ಲಿಸುತ್ತಿದ್ದಂತೆ ಸ್ಥಳದಲ್ಲೇ ಉರಿದು ಭಸ್ಮವಾಗಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ ಬೆಂಕಿ ನಂದಿಸಿದ್ದಾರೆ.

ಚಾಲಕನ ಸಮಯ ಪ್ರಜ್ಞೆಯಿಂದ 25ಕ್ಕೂ ಹೆಚ್ಚು ಪ್ರಯಾಣಿಕರು ಬದುಕುಳಿದಿದ್ದಾರೆ. ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ : DG-IGP ಅಲೋಕ್ ಮೋಹನ್ ಅಧಿಕಾರಾವಧಿ 4 ತಿಂಗಳು ವಿಸ್ತರಣೆ ಆಗುತ್ತಾ? ಏ.28ಕ್ಕೆ ನಿರ್ಧಾರ ಸಾಧ್ಯತೆ!
Author: Btv Kannada
Post Views: 316







