Download Our App

Follow us

Home » ಅಪರಾಧ » ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹ*ತ್ಯೆ ಕೇಸ್ – 15 ಪಿಎಫ್‌ಐ ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್..!

ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹ*ತ್ಯೆ ಕೇಸ್ – 15 ಪಿಎಫ್‌ಐ ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್..!

ಕೇರಳದ ಬಿಜೆಪಿ ಮುಖಂಡನ ಹತ್ಯೆ ಪ್ರಕರಣದ 15 ಜನ ಆರೋಪಿಗಳಿಗೆ ಕೇರಳ ನ್ಯಾಯಾಲಯ ಮರಣದಂಡನೆ ವಿಧಿಸಿದೆ. 2021 ರ ಡಿಸೆಂಬರ್‌ನಲ್ಲಿ ಅಲಪ್ಪುಳ ಜಿಲ್ಲೆಯಲ್ಲಿ ಬಿಜೆಪಿ ಒಬಿಸಿ ವಿಭಾಗದ ನಾಯಕ ರಂಜಿತ್ ಶ್ರೀನಿವಾಸನ್ ಅವರನ್ನು ಹೆಂಡತಿ ಮತ್ತು ಮಗುವಿನ ಎದುರೇ ಹತ್ಯೆಗೈಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿ ಪಿಎಫ್​ಐ ಸದಸ್ಯರಿಗೆ ಮರಣದಂಡನೆ ವಿಧಿಸಿ ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ವಿಜಿ ಶ್ರೀದೇವಿ ತೀರ್ಪು ಪ್ರಕಟಿಸಿದ್ದು, ಆರೋಪಿಗಳು ಯಾವುದೇ ರೀತಿಯ ಕರುಣೆಗೂ ಅರ್ಹರಲ್ಲ ಎಂದು ತೀರ್ಪು ನೀಡಿದ್ದಾರೆ.

ಇನ್ನು ಕೇರಳದಲ್ಲಿ ಇದೇ ಮೊದಲ ಬಾರಿಗೆ ಒಂದೇ ಪ್ರಕರಣದಲ್ಲಿ ಇಷ್ಟು ಮಂದಿಗೆ ಮರಣದಂಡನೆ ವಿಧಿಸಲಾಗಿದೆ. ಜನವರಿ 20 ರಂದು, ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಈ ಪ್ರಕರಣದಲ್ಲಿ ಪಿಎಫ್‌ಐ-ಎಸ್‌ಡಿಪಿಐಗೆ ನಂಟು ಹೊಂದಿರುವ 15 ಜನರನ್ನು ತಪ್ಪಿತಸ್ಥರೆಂದು ಘೋಷಿಸಿತ್ತು. ನ್ಯಾಯಾಲಯ ಇಂದು ಶಿಕ್ಷೆಯನ್ನು ಪ್ರಕಟಿಸಿದೆ.

ಆರೋಪಿಗಳು –
ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರಾದ ನಿಸಾಮ್, ಅಜ್ಮಲ್, ಅನೂಪ್, ಮುಹಮ್ಮದ್ ಅಸ್ಲಂ, ಮಣ್ಣಂಜೇರಿ ಞರವೇಲಿ ಅಬ್ದುಲ್ ಕಲಾಂ ಅಲಿಯಾಸ್ ಸಲಾಂ, ಅಬ್ದುಲ್ ಕಲಾಂ, ಸರಫುದ್ದೀನ್, ಮನ್ಷಾದ್, ಜಸೀಬ್ ರಾಜ, ನವಾಸ್, ಸಮೀರ್, ನಸೀರ್, ಝಕೀರ್ ಹುಸೈನ್, ಷಾಜಿ, ಶೆರ್ನಾಝ್ ಅಶ್ರಫ್ ಆರೋಪಿಗಳು. 10ನೇ ಆರೋಪಿ ನವಾಜ್ ಅನಾರೋಗ್ಯದಿಂದ ಬಳಲುತ್ತಿದ್ದು, ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪ್ರಕರಣದ ವಿವರ :
2021ರ ಡಿಸೆಂಬರ್ 19ರಂದು ರಂಜಿತ್ ಶ್ರೀನಿವಾಸನ್ ಅವರು ವಾಸವಾಗಿದ್ದ ಆಲೆಪ್ಪಿಯ ಮನೆಗೆ ಪ್ರವೇಶಿಸಿದ ಅರೋಪಿಗಳು ಕುಟುಂಬ ಸದಸ್ಯರ ಎದುರೇ ಕೊಚ್ಚಿ ಕೊಲೆ ಮಾಡಿದ್ದರು. ಆಲೆಪ್ಪಿ ಜಿಲ್ಲೆಯಲ್ಲಿ ನಡೆದ 3 ಸರಣಿ ರಾಜಕೀಯ ಕೊಲೆಗಳಲ್ಲಿ ಕೊನೆಯದಾಗಿ ರಂಜಿತ್ ಕೊಲೆಯಾಗಿತ್ತು. ವಯಲಾರ್‌ನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ಆರ್.ನಂದುಕೃಷ್ಣ ಹತ್ಯೆಯಾದ ಮೊದಲ ವ್ಯಕ್ತಿ. ನಂತರ ಮಣ್ಣಂಜೇರಿಯಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಕೆ.ಎಸ್.ಶಾನ್ ಕೊಲೆಯಾಗಿತ್ತು. ಇದರ ಮರುದಿನ ಬೆಳಗ್ಗೆ ರಂಜಿತ್ ಕೊಲೆಯಾಗಿತ್ತು.

ಇದನ್ನೂ ಓದಿ : ಬೆಂಗಳೂರು : ಮನೆ ಮಾಲೀಕರಿಗೆ ಸಿನಿಮಾ ಕಥೆ ಕಟ್ಟಿ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಕಳ್ಳಿ ಅರೆಸ್ಟ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here