ಮುಂಬೈ : ಪಿಕ್ ಅಪ್ ವಾಹನವೊಂದು ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿ 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಮಲ್ಶಿರಾಸ್ ತಹಸಿಲ್‌ನಲ್ಲಿ ನಡೆದಿದೆ.
ಪಂಢರಪುರ ಮೂಲದ 15 ಜನರು ಮಾಸ್ವಾಡ್‌ನ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಈ ವೇಳೆ ತಂಡುಲ್ವಾಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.
15 ಜನರನ್ನು ಹೊತ್ತೊಯ್ಯುತ್ತಿದ್ದ ಪಿಕ್-ಅಪ್ ವಾಹನವು ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ, ರಸ್ತೆಬದಿಯ ಜಮೀನಿಗೆ ನುಗ್ಗಿ ಬಾವಿಗೆ ಬಿದ್ದಿದೆ. ಇದರಿಂದಾಗಿ 8 ಮಂದಿ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮುಖೇಶ್ ಅಂಬಾನಿ ಭೇಟಿ!
Author: Btv Kannada
Post Views: 428








