ಕೇರಳದಲ್ಲಿ ಉಚಿತ ಬಸ್‌ ಪ್ರಯಾಣದ ‘ಪ್ರಿಯದರ್ಶಿನಿ’ ಯೋಜನೆಗೆ ಚಾಲನೆ!

ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್‌ ಪ್ರಯಾಣದ ಅವಕಾಶ ಕಲ್ಪಿಸುವ ‘ಪ್ರಿಯದರ್ಶಿನಿ’ ಯೋಜನೆಗೆ ಕೇರಳ ಸರ್ಕಾರ ಚಾಲನೆ ನೀಡಿದೆ. 

ಮುಖ್ಯಮಂತ್ರಿ ವಿ.ಡಿ.ಸತೀಶನ್ ತಿರುವನಂತಪುರಂನ ತಂಪನೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಯೋಜನೆಯನ್ನು ಉದ್ಘಾಟಿಸಿದರು. ಯೋಜನೆಯ ಉದ್ಘಾಟನಾ ಪ್ರಯಾಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

ಈ ಯೋಜನೆಯಡಿ ಮಹಿಳೆಯರು ಮತ್ತು ತೃತೀಯಲಿಂಗಿಗಳು ಕೇರಳ (Kerala)ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನಡೆಸುವ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ರಾಜ್ಯದಾದ್ಯಂತ ಸುಮಾರು 3,125 ಸಾಮಾನ್ಯ ಬಸ್‌ಗಳು ಈ ಯೋಜನೆಯ ವ್ಯಾಪ್ತಿಗೆ ಬರಲಿವೆ.

ಇದನ್ನೂ ಓದಿ : ನನ್ನನ್ನು ಬೈದಿದ್ದಕ್ಕಾದರೂ ಡಿಕೆಶಿ ಬಾಲಕೃಷ್ಣಗೆ ಮಂತ್ರಿ ಸ್ಥಾನ ಕೊಡಿಸಲಿ – ಆರ್‌ ಅಶೋಕ್ ವ್ಯಂಗ್ಯ!

Btv Kannada
Author: Btv Kannada

Leave a Comment

Read More