Download Our App

Follow us

Home » ರಾಜ್ಯ » ರಾಜ್ಯದಲ್ಲಿ ಆನ್​ಲೈನ್ ಬುಕ್ಕಿಂಗ್ ವ್ಯವಸ್ಥೆ ಇಲ್ಲದ ಚಾರಣ ಪಥಗಳಿಗೆ ತಾತ್ಕಾಲಿಕ ನಿರ್ಬಂಧ – ಕಾರಣವೇನು?

ರಾಜ್ಯದಲ್ಲಿ ಆನ್​ಲೈನ್ ಬುಕ್ಕಿಂಗ್ ವ್ಯವಸ್ಥೆ ಇಲ್ಲದ ಚಾರಣ ಪಥಗಳಿಗೆ ತಾತ್ಕಾಲಿಕ ನಿರ್ಬಂಧ – ಕಾರಣವೇನು?

ಬೆಂಗಳೂರು : ರಾಜ್ಯದ ಆನ್‌ಲೈನ್‌ ಬುಕ್ಕಿಂಗ್‌ ಇಲ್ಲದ ಎಲ್ಲಾ ಚಾರಣ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ ಹಾಕಲು ಸಚಿವರ ಈಶ್ವರ ಖಂಡ್ರೆ  ಸೂಚನೆ ನೀಡಿದ್ದಾರೆ. ರಾಜ್ಯದ ಆನ್‌ಲೈನ್‌ ಬುಕ್ಕಿಂಗ್‌ ಇಲ್ಲದ ಎಲ್ಲಾ ಚಾರಣ ತಾಣಗಳಲ್ಲಿ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ, ನಿರ್ದಿಷ್ಟ ಸಂಖ್ಯೆಗೆ ‌ಸೀಮಿತಗೊಳಿಸುವ ಪ್ರಮಾಣಿತ ಕಾರ್ಯ ವಿಧಾನ ಬರುವವರೆಗೆ ತಾತ್ಕಾಲಿಕ ನಿರ್ಬಂಧ ಹೇರಲು ಸಚಿವರು ಸೂಚಿಸಿದ್ದಾರೆ.

ನಿರ್ಬಂಧ ಯಾಕೆ..? ಗಣರಾಜ್ಯೋತ್ಸವದಂದು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಬಳಿ ಇರುವ ಕುಮಾರ ಪರ್ವತ ಟ್ರೆಕ್ಕಿಂಗ್‌ ಮಾಡಲು ಸಾವಿರಾರು ಮಂದಿ ಏಕಾಏಕಿ ಆಗಮಿಸಿದ್ದರು. ಇದರ ಫೋಟೋ ಹಾಗೂ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗಿತ್ತು. ಸಾವಿರಾರು ಬಂದು ಏಕಾಏಕಿ ಚಾರಣಕ್ಕೆ ಬಂದಿದ್ದರಿಂದ ಅರಣ್ಯ ಪ್ರದೇಶಕ್ಕೆ ತೊಂದರೆ ಆಗಿದೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಸರ್ಕಾರ ಹೊಸ ರೂಲ್ಸ್‌ ಜಾರಿಗೆ ತರಲು ಪ್ಲಾನ್‌ ಮಾಡುತ್ತಿದೆ. ಹೀಗಾಗಿ ಅಲ್ಲಿಯವರೆಗೆ ತಾತ್ಕಾಲಿಕವಾಗಿ ಚಾರಣ ಪ್ರದೇಶಗಳಿಗೆ ನಿರ್ಬಂಧ ಹೇರುವಂತೆ ಸೂಚನೆ ನೀಡಲಾಗಿದೆ.

ಪ್ರಕಟಣೆಯಲ್ಲಿ ಏನಿದೆ? ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಆಗಮಿಸಿರುವ ಫೋಟೋ ಹಾಗೂ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲಿ ಸಾಕಷ್ಟು ವೈರಲ್‌ ಆಗಿತ್ತು. ಕೆಲವರು ಟೆಂಟ್‌ ಹಾಕಿ ಪರ್ವತದಲ್ಲಿ ರಾತ್ರಿ ಕಳೆಯುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಪರಿಸರ ತಜ್ಞರು ಅರಣ್ಯ ಉಳಿವಿನ ಬಗ್ಗೆ ತಮ್ಮ ಕಳಕಳಿ ಹಾಗೂ ಆತಂಕವನ್ನು ಹೊರಹಾಕಿದ್ದಾರೆ. ಹೀಗೆ ಸಾವಿರಾರು ಸಂಖ್ಯೆಯಲ್ಲಿ ಚಾರಣಕ್ಕೆ ಜನರು ದಟ್ಟ ಅರಣ್ಯವಿರುವ ಗಿರಿ ಪ್ರದೇಶಗಳಿಗೆ , ಪಶ್ಚಿಮಘಟ್ಟಕ್ಕೆ ಪ್ರತಿವಾರವೂ ಆಗಮಿಸಿದರೆ ನಿಯಂತ್ರಿಸುವುದು ಮತ್ತು ಅವರ ತಪಾಸಣೆ ಮಾಡಿ ಬಿಡುವುದು ಅರಣ್ಯ ಇಲಾಖೆಯ ಸಿಬ್ಬಂದಿಗೂ ದೊಡ್ಡ ಸವಾಲಾಗುತ್ತದೆ. ಇದರಿಂದ ಪರಿಸರಕ್ಕೂ ಹಾನಿಯಾಗುತ್ತದೆ. ಜೊತೆಗೆ ಜಲ ಮೂಲಗಳು ಕೂಡ ಕಲುಷಿತಗೊಳ್ಳುವ ಅಪಾಯವಿದೆ.

150 ಚಾರಣಿಗರಿಗೆ ಮಾತ್ರ ಅವಕಾಶ : ಪ್ರಸ್ತುತ ಅರಣ್ಯ ಇಲಾಖೆಯ ಪರಿಸರ ಪ್ರವಾಸೋದ್ಯಮ ವಿಭಾಗದ ವತಿಯಿಂದ ನಿರ್ವಹಿಸುತ್ತಿರುವ ಚಾರಣ ಪಥಗಳಲ್ಲಿ 150 ಚಾರಣಿಗರಿಗೆ ಮಾತ್ರ ಅವಕಾಶ ನೀಡಲಾಗುತ್ತಿದ್ದು, https://www.karnatakaecotourism.com/ ನಲ್ಲಿ ಬುಕ್ಕಿಂಗ್​ ಗೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ :  ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹ*ತ್ಯೆ ಕೇಸ್ – 15 ಪಿಎಫ್‌ಐ ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್..!

 

 

Leave a Comment

DG Ad

RELATED LATEST NEWS

Top Headlines

ಮಾಸ್ ಕಥನದ ಸುಳಿವಿನೊಂದಿಗೆ ಗಮನ ಸೆಳೆದ ‘ಗನ್ಸ್ ಅಂಡ್ ರೋಸಸ್’ ಟೀಸರ್ – ಚಿತ್ರ ಡಿ.27ಕ್ಕೆ ತೆರೆಗೆ..!

ಖ್ಯಾತ ಕಥೆಗಾರ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ಈಗ ಸ್ಯಾಂಡಲ್‌ವುಡ್‌ಗೆ ನಾಯಕನಾಗಿ ಎಂಟ್ರಿಕೊಟ್ಟಿದ್ದಾರೆ. ಅದು ‘ಗನ್ಸ್ ಅಂಡ್ ರೋಸಸ್’ ಎಂಬ ಚಿತ್ರದ ಮೂಲಕ. ಸಿನಿಮಾ ಪಾಲಿಗೆ

Live Cricket

Add Your Heading Text Here