ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆ ಗೋಡೆಗೆ ಕಾರು ಗುದ್ದಿರುವ ಘಟನೆ ದಾವಣಗೆರೆಯ ಕುಕ್ಕವಾಡ ಗ್ರಾಮದಲ್ಲಿ ನಡೆದಿದೆ. ಕುಕ್ಕವಾಡದ ಪುರಂದರ ಎಂಬುವವರಿಗೆ ಸೇರಿದ ಮನೆಯ ಕಂಪೌಂಡ್ಗೆ ಬ್ರಿಜಾ ಕಾರು ಗುದ್ದಿದೆ.
ಕಾರು ಗುದ್ದಿದ ರಭಸಕ್ಕೆ ಮನೆಯಲ್ಲಿ ಮಲಗಿದ್ದ ಮಹಿಳೆ ಮೇಲೆ ಗೋಡೆ ಕುಸಿದು ಬಿದ್ದಿದೆ. ತ್ಯಾವಣಿಗಿಯಿಂದ-ದಾವಣಗೆರೆಗೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರ್ನಲ್ಲಿದ್ದವರು ಮದ್ಯಪಾನ ಮಾಡಿ ಕಾರು ಚಲಾಯಿಸಿರುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣ ಹದಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ : ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ – ಯತ್ನಾಳ್ ಸೇರಿ ಹಲವರು ಪೊಲೀಸರ ವಶಕ್ಕೆ..!
Post Views: 215