Download Our App

Follow us

Home » ಜಿಲ್ಲೆ » ಪಂಚಮಸಾಲಿ ಹೋರಾಟದಲ್ಲಿ ಟ್ವಿಸ್ಟ್​ – ಮೀಸಲು ಕೊಡದಂತೆ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಹೋರಾಟ..!

ಪಂಚಮಸಾಲಿ ಹೋರಾಟದಲ್ಲಿ ಟ್ವಿಸ್ಟ್​ – ಮೀಸಲು ಕೊಡದಂತೆ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಹೋರಾಟ..!

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇನ್ನೊಂದೆಡೆ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ಕೂಡ ಜೋರಾಗಿದೆ. ಆದರೆ ಇದೀಗ ಪಂಚಮಸಾಲಿ ಹೋರಾಟಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಮೀಸಲು ಕೊಡದಂತೆ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಹೋರಾಟದ ಕೂಗು ಕೇಳಿ ಬರುತ್ತಿದೆ.

ಈಗಾಗಲೇ ಮೀಸಲಾತಿ ವಿರೋಧಿಸಿ ಸಿಎಂಗೆ ಹಿಂದುಳಿದ ಜಾತಿಗಳ ಒಕ್ಕೂಟ ಪತ್ರ ಬರೆದಿದೆ. ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಒಕ್ಕೂಟ, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡಬೇಡಿ ಎಂದು ಮನವಿ ಮಾಡಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಧರ್ಮ ಸಂಕಟಕ್ಕೆ ಸಿಲುಕಿದ್ದಾರೆ.

ಮತ್ತೊಂದೆಡೆ 2A ಮೀಸಲಾತಿಗೆ ಸಂಬಂಧ ಪಟ್ಟಂತೆ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಸಮುದಾಯದ ಹೋರಾಟಗಾರರು, ಸುವರ್ಣ ಸೌಧಕ್ಕೆ ನುಗ್ಗಲು ಪ್ಲಾನ್​​ ನಡೆಸಿದ್ದರು. ಅಷ್ಟೇ ಅಲ್ಲದೆ ರಾಷ್ಟ್ರೀಯ ಹೆದ್ದಾರಿಗಳನ್ನೂ ತಡೆದು ಪ್ರತಿಭಟನೆ ಮಾಡಲು ನಿರ್ಧಾರ ಮಾಡಿದ್ದರು. ಈ ಹಿನ್ನಲೆಯಲ್ಲಿ ಪೊಲೀಸರು, ಸುವರ್ಣಸೌಧದ ಸುತ್ತಮುತ್ತ ಹಾಗೂ ಬೆಳಗಾವಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ ಮಾಡಿದ್ದಾರೆ. ಹೆದ್ದಾರಿಗಳಲ್ಲೂ ಪೊಲೀಸರ ನಿಯೋಜಿಸಿ ಜಿಲ್ಲಾಡಳಿತ ಅಲರ್ಟ್ ಆಗಿದೆ.

ಇದನ್ನೂ ಓದಿ : ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯರು ಸಮುದ್ರಪಾಲು ಕೇಸ್​ : ಶಾಲೆಯ ಪ್ರಾಂಶುಪಾಲೆ ಅಮಾನತು, ಅತಿಥಿ ಶಿಕ್ಷಕರ ವಜಾ..!

Leave a Comment

DG Ad

RELATED LATEST NEWS

Top Headlines

ಸಿ.ಟಿ ರವಿ ಅದ್ಧೂರಿ ಸ್ವಾಗತ ವೇಳೆ ಆ್ಯಂಬುಲೆನ್ಸ್​ಗಳ ದುರ್ಬಳಕೆ – ಚಾಲಕರು & ಮಾಲೀಕರ ಮೇಲೆ FIR ದಾಖಲು..!

ಚಿಕ್ಕಮಗಳೂರು : ಸಿ.ಟಿ ರವಿ ಅದ್ಧೂರಿ ಸ್ವಾಗತ ವೇಳೆ ಆ್ಯಂಬುಲೆನ್ಸ್​ಗಳ ದುರ್ಬಳಕೆ ಮಾಡಿದ ಸಂಬಂಧ ಆ್ಯಂಬುಲೆನ್ಸ್​​ ಚಾಲಕರು ಮತ್ತು ಮಾಲೀಕರ ಮೇಲೆ FIR ದಾಖಲಾಗಿದೆ. 7 ಆ್ಯಂಬುಲೆನ್ಸ್​​

Live Cricket

Add Your Heading Text Here