Download Our App

Follow us

Home » ಮೆಟ್ರೋ » ಬೆಂಗಳೂರಿನ ಹಲವೆಡೆ ಇಂದು, ನಾಳೆ ವಿದ್ಯುತ್ ವ್ಯತ್ಯಯ – ಯಾವೆಲ್ಲಾ ಏರಿಯಾ? ಇಲ್ಲಿದೆ ಮಾಹಿತಿ..!

ಬೆಂಗಳೂರಿನ ಹಲವೆಡೆ ಇಂದು, ನಾಳೆ ವಿದ್ಯುತ್ ವ್ಯತ್ಯಯ – ಯಾವೆಲ್ಲಾ ಏರಿಯಾ? ಇಲ್ಲಿದೆ ಮಾಹಿತಿ..!

ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆ.ವಿ ಎಲ್.ಆರ್. ಬಂಡೆ ಕೇಂದ್ರದ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ(ಡಿ.19) ಇಂದು ಹಾಗೂ ರಾಜನಕುಂಟೆ ಸಬ್‌ಸ್ಟೇಷನ್​ನ ಹೆಬ್ಬಾಳ ಸಿ-7 ಉಪವಿಭಾಗದಲ್ಲಿ ನಾಳೆ (ಡಿ.20) ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ (BESCOM) ಮನವಿ ಮಾಡಿದೆ.

ಡಿಸೆಂಬರ್-19 ರಂದು ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು : ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 4ಗಂಟೆವರೆಗೆ ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ ೧ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲ್ಯೂ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ, ಎಂ.ಎಸ್. ರಾಮಯ್ಯ ಉತ್ತರ ಸಿಟಿ, ಥಣಿಸಂದ್ರ ಮುಖ್ಯ ರಸ್ತೆ, ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ತ್ರಿ ಪಾಳ್ಯ, ರಾಯಲ್ ಎನ್‌ಕ್ಲೇವ್, ಶ್ರೀರಾಂಪುರ ವಿಲೇಜ್, ವಿ.ಹೆಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17 ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶಗಳು ಇದರಲ್ಲಿ ಇರಲಿವೆ.

66/11 kV ರಾಜನಕುಂಟೆ ಸಬ್‌ಸ್ಟೇಷನ್​ನ ಹೆಬ್ಬಾಳ ವಿಭಾಗದ ಸಿ-7 ಉಪವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಡಿಸೆಂಬರ್-20ರಂದು ವಿದ್ಯುತ್ ವ್ಯತ್ಯಯ : ಶುಕ್ರವಾರ 20.12.2024 ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್‌ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಇದನ್ನೂ ಓದಿ : ಊಟಕ್ಕೂ ಬಿಡದೇ ತಡರಾತ್ರಿವರೆಗೂ ಕಲಾಪ – ವಿಧಾನಸಭೆಯಲ್ಲಿ ದಾಖಲೆ ನಿರ್ಮಿಸಿದ ಯು.ಟಿ.ಖಾದರ್​​​..!

Leave a Comment

DG Ad

RELATED LATEST NEWS

Top Headlines

ಮತ್ತೊಂದು ಸ್ಟಾರ್ ಜೋಡಿಯ ಡಿವೋರ್ಸ್ ಪಕ್ಕಾನಾ – ಇನ್‌ಸ್ಟಾಗ್ರಾಂನಲ್ಲಿ ಅನ್‌ಫಾಲೋ ಮಾಡಿದ ದಂಪತಿ!

ಮುಂಬೈ: ಟಿಂ ಇಂಡಿಯಾದ ಆಲ್​​ರೌಂಡರ್​ ಹಾರ್ದಿಕ್ ಪಾಂಡ್ಯಾ ಡಿವೋರ್ಸ್​ ಬೆನ್ನಲ್ಲೇ ಇದೀಗ ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಆಟಗಾರನ ವಿಚ್ಛೇದನ ಸುದ್ದಿ ವ್ಯಾಪಕ ಚರ್ಚೆಯಾಗುತ್ತಿದೆ.  ಭಾರತದ ತಂಡದ

Live Cricket

Add Your Heading Text Here