Download Our App

Follow us

Home » ರಾಜಕೀಯ » ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿನ್ನರ್ ಮೀಟಿಂಗ್ – ಏನೆಲ್ಲಾ ಚರ್ಚೆ ನಡೆಸಿದ್ರು?

ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿನ್ನರ್ ಮೀಟಿಂಗ್ – ಏನೆಲ್ಲಾ ಚರ್ಚೆ ನಡೆಸಿದ್ರು?

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಲೋಕಸಭೆ ಚುನಾವಣಾ ತಯಾರಿಗಳು ನಡೆಯುತ್ತಿವೆ. ಇದೀಗ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಗುರುವಾರ ಸಚಿವರ ಡಿನ್ನರ್ ಮೀಟಿಂಗ್ ಒಂದು ನಡೆದಿದೆ.

ಕೇಂದ್ರ ಬಜೆಟ್​ ಬೆನ್ನಲ್ಲೇ  ಸಿದ್ದು ಮೀಟಿಂಗ್ ಭಾರಿ ಕುತೂಹಲ ಕೆರಳಿಸಿದೆ. ಎಲ್ಲಾ ಸಚಿವರನ್ನು ಊಟಕ್ಕೆ ಆಹ್ವಾನಿಸಿದ್ದ ಸಿಎಂ, ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಬಿಡುಗಡೆಯ ನಂತರ ಎದ್ದಿರುವ ಅಸಮಾಧಾನ ಶಮನಕ್ಕೆ ಮುಂದಾದರು ಎಂದು ಹೇಳಲಾಗಿದೆ. ಕೆಲವು ಸಚಿವರ ಗಮನಕ್ಕೆ ತಾರದೆ ನೇಮಕಾತಿ ಮಾಡಿರುವುದು ಅಸಮಾಧಾನಕ್ಕೆ ಕಾರಣವಾಗಿತ್ತು.

ಡಿಸಿಎಂ ಡಿಕೆಶಿ ಸೇರಿದಂತೆ ಎಲ್ಲ ಸಚಿವರು ಡಿನ್ನರ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಮುಂದಿನ ತಂತ್ರಗಾರಿಕೆ, ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ. ಚುನಾವಣೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕುವ ಕುರಿತೂ ಚರ್ಚೆ ನಡೆದಿದೆ. ಸಚಿವರಿಗೆ ಕೆಲವು ಸೂಚನೆಗಳನ್ನು ನೀಡಿದ ಸಿದ್ದರಾಮಯ್ಯ, ಕಾಂಗ್ರೆಸಿನಿಂದ ಆಗುತ್ತಿರುವ ಎಡವಟ್ಟುಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಶಾಸಕರು ಕೊಟ್ಟ ಹೇಳಿಕೆಯನ್ನು ಬಿಜೆಪಿ ದೊಡ್ಡದು ಮಾಡುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಅನಗತ್ಯ ಹೇಳಿಕೆಗಳನ್ನು ನೀಡಬೇಡಿ. ಶಾಸಕಾಂಗ ಸಭೆಯಲ್ಲಿ ಶಾಸಕರಿಗೂ ಹೇಳುತ್ತೇನೆ.‌ ರಾಮಮಂದಿರ ಉದ್ಘಾಟನೆ ನಂತರ ಬಿಜೆಪಿ ಆ್ಯಕ್ಟೀವ್​ ಆಗಿದೆ. ನಮ್ಮ ಮಾತು‌ ಬಿಜೆಪಿಗೆ ಆಹಾರವಾಗಬಾರದು ಎಂದು ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ. ಹೆಚ್.ಸಿ.ಮಹದೇವಪ್ಪ ಹೊರತು ಪಡಿಸಿ ಉಳಿದೆಲ್ಲರು ಡಿನ್ನರ್ ನಲ್ಲಿ ಭಾಗಿಯಾಗಿದ್ದರು.

ಇದೇ ವೇಳೆ, ಲೋಕಸಭಾ ಚುನಾವಣೆ ವಿಚಾರದ ಬಗ್ಗೆಯೂ ಅನೌಪಚಾರಿಕವಾಗಿ ಚರ್ಚಿಸಲಾಗಿದೆ. ಜೊತೆಗೆ, ಅಂಕಿಅಂಶಗಳ ಸಮೇತ ಬಿಜೆಪಿಗೆ ತಿರುಗೇಟು ನೀಡಬೇಕು. ಕೇಂದ್ರದಿಂದ ಬಾರದ ಅನುದಾನ ಹಾಗೂ ಹಿಂದಿನ ಬಿಜೆಪಿ ಸರ್ಕಾರದ ವೈಫಲ್ಯದ ಬಗ್ಗೆ ಮಾತನಾಡಬೇಕು.‌ ಲೋಕಸಭೆಯಲ್ಲಿ ಹೆಚ್ಚು ಕ್ಷೇತ್ರ ಗೆಲ್ಲಲು ಕೆಲಸ ಮಾಡಬೇಕು.‌ ನಮ್ಮ ಶಾಸಕರನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡಬೇಕು ಎಂದು ಸಚಿವರಿಗೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇಂದ್ರದಿಂದ ಬಾರದ ಅನುದಾನದ ಬಗ್ಗೆ ಧ್ವನಿ ಎತ್ತಿ ಎಂದು ಸಿಎಂ ಸಿದ್ದು ಸಚಿವರಿಗೆ ಕಿವಿ ಮಾತು ಹೇಳಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ವೈಪಲ್ಯದ ಬಗ್ಗೆ ಮಾತನಾಡಿ, ಈ ಮೂಲಕ ಬಿಜೆಪಿ ನಾಯಕರ ಬಾಯಿ‌ ಮುಚ್ಚಿಸಿ ಎಂದು ಸಲಹೆ ನೀಡಿದ್ದಾರೆ. ಊಟದ ಜೊತೆಗೆ ಸಚಿವರಿಗೆ ಸಿಎಂ ಸಿದ್ದು ನೀತಿಪಾಠ ಕೂಡ ಮಾಡಿದ್ದಾರೆ. ಎನ್ನಲಾಗಿದೆ.

ಇದನ್ನೂ ಓದಿ : ಪ್ರತ್ಯೇಕ ದೇಶಕ್ಕೆ ಧ್ವನಿ ಎತ್ತಿದ ಸಂಸದ ಡಿಕೆ ಸುರೇಶ್..!

Leave a Comment

DG Ad

RELATED LATEST NEWS

Top Headlines

ಪ್ರಭಾಸ್‌ ಜೊತೆಗೆ ಒಂದಲ್ಲ ಎರಡಲ್ಲ ಮೂರು ಸಿನಿಮಾಗಳನ್ನು ಘೋಷಿಸಿದ ಹೊಂಬಾಳೆ ಫಿಲಂಸ್‌..!

ಕನ್ನಡ ಚಿತ್ರಂಗಕ್ಕೆ ಮಾತ್ರ ಸೀಮಿತವಾಗದ ಹೊಂಬಾಳೆ ಫಿಲಂಸ್‌ ಸಂಸ್ಥೆ ಪರಭಾಷೆ ಸಿನಿಮಾಗಳಿಗೆ ಬಂಡವಾಳ ಹೂಡುವ ಮೂಲಕ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಕೆಜಿಎಫ್‌, ಕೆಜಿಎಫ್‌ 2, ಕಾಂತಾರ, ಸಲಾರ್‌, ಈಗ

Live Cricket

Add Your Heading Text Here