Download Our App

Follow us

Home » ರಾಷ್ಟ್ರೀಯ » ಮನಮೋಹನ್​ ಸಿಂಗ್ ನಿಧನ : ರಾಜ್ಯದಲ್ಲಿ 7 ದಿನ ಶೋಕಾಚಾರಣೆ, ಇಂದು ಸರ್ಕಾರಿ ರಜೆ ಘೋಷಣೆ..

ಮನಮೋಹನ್​ ಸಿಂಗ್ ನಿಧನ : ರಾಜ್ಯದಲ್ಲಿ 7 ದಿನ ಶೋಕಾಚಾರಣೆ, ಇಂದು ಸರ್ಕಾರಿ ರಜೆ ಘೋಷಣೆ..

ಬೆಂಗಳೂರು : ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್​ ನಾಯಕ ಮನಮೋಹನ್​ ಸಿಂಗ್ ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ. ಅವರ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಇಂದು ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನ ಹಿನ್ನಲೆ ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಕಾರ್ಯಕ್ರಮ ರದ್ದುಗೊಳಿಸಿ ಕಾಂಗ್ರೆಸ್​ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಇತರ ಪ್ರಮುಖ ನಾಯಕರು ಬೆಳಗಾವಿಯಿಂದ ದೆಹಲಿಗೆ ತೆರಳಿದ್ದಾರೆ.

ರಾಹುಲ್‌ ಗಾಂಧಿ ಕಂಬನಿ : ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಕಂಬನಿ ಮಿಡಿದಿದ್ದಾರೆ. ನನ್ನ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ ಎಂದು ನೋವಿನಿಂದ ನುಡಿದಿದ್ದಾರೆ. ಎಕ್ಸ್‌ನಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿರುವ ರಾಹುಲ್‌ ಗಾಂಧಿ, ಮನಮೋಹನ್ ಸಿಂಗ್ ಅವರು ಭಾರತವನ್ನು ಅಪಾರ ಬುದ್ಧಿವಂತಿಕೆ ಮತ್ತು ಸಮಗ್ರತೆಯಿಂದ ಮುನ್ನಡೆಸಿದರು. ಅವರ ನಮ್ರತೆ ಮತ್ತು ಅರ್ಥಶಾಸ್ತ್ರದ ಆಳವಾದ ತಿಳುವಳಿಕೆಯು ರಾಷ್ಟ್ರವನ್ನು ಪ್ರೇರೇಪಿಸಿತು ಎಂದು ನೆನಪಿಸಿಕೊಂಡಿದ್ದಾರೆ. ನಾನು ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ. ಅವರನ್ನು ಮೆಚ್ಚಿದ ಲಕ್ಷಾಂತರ ಜನರು ಅವರನ್ನು ಅತ್ಯಂತ ಹೆಮ್ಮೆಯಿಂದ ನೆನಪಿಸಿಕೊಳ್ಳುತ್ತಾರೆ. ಶ್ರೀಮತಿ ಕೌರ್ (ಸಿಂಗ್ ಅವರ ಪತ್ನಿ) ಮತ್ತು ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಎಕ್ಸ್‌ನಲ್ಲಿ ರಾಹುಲ್‌ ಗಾಂಧಿ ಬರೆದುಕೊಂಡಿದ್ದಾರೆ

ಸಿಎಂ ಸಿದ್ದರಾಮಯ್ಯ ಸಂತಾಪ : ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ ಎಂದು ಹೇಳಿದ್ದಾರೆ. ಮಾತಿಗಿಂತ ಕೃತಿ‌ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ. ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಂತಾಪ ನುಡಿಗಳಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಮಾಜಿ ಪ್ರಧಾನ ಮಂತ್ರಿ ಡಾ.ಮನಮೋಹನ್ ಸಿಂಗ್ ವಿಧಿವಶ..!

Leave a Comment

DG Ad

RELATED LATEST NEWS

Top Headlines

ಪಂಚಭೂತಗಳಲ್ಲಿ ಲೀನರಾದ ಮನಮೋಹನ್ ಸಿಂಗ್ – ಅಂತ್ಯವಾಯ್ತು ‘ಸಾಧಕ’ನ ಪರ್ವ..!

ನವದೆಹಲಿ : ಹೊಸ ಭಾರತ ನಿರ್ಮಾಣದ ಕನಸು ಕಂಡ ಕನಸುಗಾರ ಮನಮೋಹನ್ ಸಿಂಗ್ ಇನ್ನು ನೆನಪು ಮಾತ್ರ. ಡಿ.​ 26ರಂದು ಇಹಲೋಕ ಯಾತ್ರೆ ಮುಗಿಸಿದ ಭಾರತದ ಮಾಜಿ

Live Cricket

Add Your Heading Text Here