Download Our App

Follow us

Home » ಅಪರಾಧ » ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಸಾಬೀತು – ಚಾರ್ಜ್​ಶೀಟ್​ನಲ್ಲಿ ಸ್ಫೋಟಕ ಸಂಗತಿಗಳು ಬಯಲು..!

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಸಾಬೀತು – ಚಾರ್ಜ್​ಶೀಟ್​ನಲ್ಲಿ ಸ್ಫೋಟಕ ಸಂಗತಿಗಳು ಬಯಲು..!

ಬೆಂಗಳೂರು : ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಾಸಕ ಮುನಿರತ್ನ ವಿರುದ್ಧ ಕೇಳಿಬಂದಿರುವ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ತನಿಖೆಯಲ್ಲಿ ರಜುವಾತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ವಿಶೇಷ ತನಿಖಾ ತಂಡ (SIT) 2,481 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದೆ.

ತಮ್ಮ ವಿರೋಧಿಗಳನ್ನು ಹೆಚ್​ಐವಿ-ಏಡ್ಸ್ ​​ಪೀಡಿತರ ಮೂಲಕ ಹನಿಟ್ರ್ಯಾಪ್​​ ಬಲಗೆ ಬೀಳಿಸಿ ಏಡ್ಸ್​​ ಹರಡುವಿಕೆಗೆ ಶಾಸಕ ಮುನಿರತ್ನ ದುಷ್ಕೃತ್ಯ ಎಸಗಿದ್ದರು ಎಂದು ಎಸ್​ಐಟಿ ಸಲ್ಲಿಸಿದ ಚಾರ್ಜ್​​​ಶೀಟ್​ನಲ್ಲಿ ಉಲ್ಲೇಖವಾಗಿದೆ. ಶಾಸಕ ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್​ಪೆಕ್ಟರ್​ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ.

ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಒಟ್ಟು ಏಳು ಜನರ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಗೆ ಸರ್ಕಾರ ಎಸ್​​ಐಟಿ ರಚಿಸಿತ್ತು. ಈ ಬಗ್ಗೆ ತನಿಖೆ ನಡೆಸಿದ ಎಸ್​ಐಟಿ, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಅವರ ಸಹಚರರ ಮೇಲೆ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಆರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣ ಸಂಬಂಧ ಎಸ್​ಐಟಿ 146 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿತ್ತು. ಇದರಲ್ಲಿ ನ್ಯಾಯಾಧೀಶರ ಮುಂದೆ ಸಿಆರ್​ಪಿಸಿ 164ರಡಿ 8 ಜನರ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆ. 850 ದಾಖಲೆ ಒಳಗೊಂಡ 2,481 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ ಎಸ್​ಐಟಿ ಸಲ್ಲಿಕೆ ಮಾಡಿದೆ. ಐಪಿಸಿ 354ಎ, 354ಸಿ, 376(2)ಎನ್, 308, 120ಬಿ, 504, 506, 270, 119, 201, 511, ಐಟಿ ಆ್ಯಕ್ಟ್ 66E ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಮುನಿರತ್ನ ವಿರುದ್ಧ ಅತ್ಯಾಚಾರ, ಜಾತಿ ನಿಂದನೆ, ಬೆದರಿಕೆ ಹಾಗೂ ಹನಿಟ್ರ್ಯಾಪ್​ ಯತ್ನ ಸೇರಿ 4 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್​ಗೆ ಜಾತಿನಿಂದನೆ ಹಾಗೂ ಬಿಜೆಪಿ ಕಾರ್ಯಕರ್ತೆ ಮೇಲಿನ ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಪೂರ್ಣಗೊಳಿಸಿ ಸಿಐಡಿ ನವೆಂಬರ್​ 30ರಂದು ಚಾರ್ಜ್​ಶೀಟ್ ಸಲ್ಲಿಕ್ಕೆ ಮಾಡಿತ್ತು. ಸದ್ಯ ಗುತ್ತಿಗೆದಾರನ ಬಳಿ ಲಂಚ ಕೇಳಿದ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಅನುಮತಿಗೆ ಎಸ್​ಐಟಿ ಕಾಯುತ್ತಿದೆ.

ಇದನ್ನೂ ಓದಿ : ಸಿಎನ್​ಜಿ ಹಾಗೂ ಕಲ್ಲು ತುಂಬಿದ್ದ ಲಾರಿಗಳ ಮಧ್ಯೆ ಭೀಕರ ಡಿಕ್ಕಿ.. ನಡುರಸ್ತೆಯಲ್ಲೇ ಹೊತ್ತಿ ಉರಿದ ವಾಹನಗಳು..!

Leave a Comment

DG Ad

RELATED LATEST NEWS

Top Headlines

ಮೃತ ಗುತ್ತಿಗೆದಾರ ಸಚಿನ್ ನಿವಾಸಕ್ಕೆ ಸಚಿವ ಖಂಡ್ರೆ ಭೇಟಿ – ಮನೆಯಿಂದ ಕಾಲ್ಕಿತ್ತ ಎಸ್​​ಪಿ ಪ್ರದೀಪ್ ಗುಂಟಿ!

ಬೀದರ್ : ಸಚಿವ ಪ್ರಿಯಾಂಕ್​​ ಖರ್ಗೆ ಆಪ್ತನ ಮೇಲೆ ಗಂಭೀರ ಆರೋಪ ಮಾಡಿ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್‌​ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ರಾಜ್ಯಾದ್ಯಂತ ಸರ್ಕಾರ ಹಾಗೂ ವಿಪಕ್ಷಗಳ

Live Cricket

Add Your Heading Text Here