ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ದುರಂತ ಸಂಭವಿಸಿದೆ. 175 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್‌ವೇಯಿಂದ ಸ್ಕಿಡ್ ಆಗಿ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದಿದೆ.
ಈ ದುರಂತದಲ್ಲಿ ಸುಮಾರು 23 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಜೆಜು ಏರ್ ವಿಮಾನವು ಥೈಲ್ಯಾಂಡ್‌ನಿಂದ ವಾಪಸ್ ಆಗುತ್ತಿದ್ದಾಗ ಅನಾಹುತ ಸಂಭವಿಸಿದೆ. ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಕಿಯನ್ನು ನಂದಿಸಲಾಗಿದೆ.
ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಮುವಾನ್ ವಿಮಾನ ನಿಲ್ದಾಣದ ಅಧಿಕಾರಿ ತಿಳಿಸಿದ್ದಾರೆ. ಕೆಲವು ಮಾಹಿತಿಗಳ ಪ್ರಕಾರ ಲ್ಯಾಂಡಿಂಗ್ ವೇಳೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಅಲ್ಲಿಯ ಕಾಲಮಾನದ ಪ್ರಕಾರ ಬೆಳಗ್ಗೆ 9.7ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಲ್ಯಾಂಡಿಂಗ್ ವೇಳೆ ವಿಮಾನವು ಗಂಟೆಗೆ 280 ಕಿಲೋ ಮೀಟರ್ ವೇಗದಲ್ಲಿತ್ತು.
ಇದನ್ನೂ ಓದಿ : ನ್ಯೂ ಇಯರ್ ಸೆಲೆಬ್ರೇಟ್ ಮಾಡಿದ್ರೆ ಹೋಟೆಲ್‌ಗೆ ನುಗ್ಗಿ ಹೊಡೆಯುತ್ತೇವೆ – ಪ್ರಮೋದ್ ಮುತಾಲಿಕ್ ವಾರ್ನಿಂಗ್..!