Download Our App

Follow us

Home » ಕ್ರೀಡೆ » ಐಸಿಸಿ ಟಿ-20 ವರ್ಷದ ಕ್ರಿಕೆಟಿಗ ಪ್ರಶಸ್ತಿ – ಆಸೀಸ್​ನ ಟ್ರಾವಿಸ್‌ ಹೆಡ್​ ಜೊತೆ ಭಾರತೀಯ ಆಟಗಾರನ ಫೈಟ್!

ಐಸಿಸಿ ಟಿ-20 ವರ್ಷದ ಕ್ರಿಕೆಟಿಗ ಪ್ರಶಸ್ತಿ – ಆಸೀಸ್​ನ ಟ್ರಾವಿಸ್‌ ಹೆಡ್​ ಜೊತೆ ಭಾರತೀಯ ಆಟಗಾರನ ಫೈಟ್!

ದುಬೈ: ಐಸಿಸಿ ಟಿ-20 ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ನಾಲ್ವರು ಆಟಗಾರರ ಹೆಸರು ನಾಮನಿರ್ದೇಶನವಾಗಿದೆ. ನಾಲ್ವರು ಘಟನಾಘಟಿ ಆಟಗಾರರ ಪೈಕಿ ಭಾರತದ ಚಾಂಪಿಯನ್‌ ಬೌಲರ್‌ ಅರ್ಷ್‌ದೀಪ್‌ ಸಿಂಗ್‌ ಕೂಡ ಸ್ಥಾನ ಪಡೆದಿದ್ದಾರೆ. ಅರ್ಷ್‌ದೀಪ್‌ ಸಿಂಗ್‌  ಹೊರತುಪಡಿಸಿದರೆ ಆಸ್ಟೇಲಿಯಾದ ದೈತ್ಯ ಬ್ಯಾಟರ್‌ ಟ್ರಾವಿಸ್‌ಹೆಡ್‌, ಪಾಕಿಸ್ತಾನ ತಂಡದ ಮಾಜಿ ನಾಯಕ ಬಾಬರ್‌ ಆಜಂ ಹಾಗೂ ಜಿಂಬಾಬ್ವೆ ಆಟಗಾರ ಸಿಖಂದರ್‌ ರಾಜಾ ಅವರು ಸ್ಥಾನ ಪಡೆದುಕೊಂಡಿದ್ದಾರೆ.

ಪ್ರಸಕ್ತ ವರ್ಷದಲ್ಲಿ ಟಿ-20 ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ನಾಲ್ವರು ಆಟಗಾರರನ್ನು ನಾಮನಿರ್ದೇಶನ ಮಾಡಲಾಗಿದೆ. ಈ ನಾಲ್ವರು ಆಟಗಾರರ ಪೈಕಿ ಯಾರಿಗೆ 2024ರ ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿ ಸಿಗುತ್ತೆ ಅನ್ನೋದು ಕುತೂಹಲ ಮೂಡಿಸಿದೆ.

ನಾಲ್ವರು ಆಟಗಾರರ ಪೈಕಿ ಯಾರಿಗೆ ಪ್ರಶಸ್ತಿ ? 

1. ಟ್ರಾವಿಸ್‌ಹೆಡ್‌ : ಆಸ್ಟ್ರೇಲಿಯಾದ ಸ್ಪೋಟಕ ಎಡಗೈ ಬ್ಯಾಟರ್ ಟ್ರಾವಿಸ್‌ ಹೆಡ್ 2024ರ ಕ್ಯಾಲೆಂಡರ್ ವರ್ಷದಲ್ಲಿ ಅತ್ಯದ್ಭುತ ಪ್ರದರ್ಶನ ತೋರಿದ್ದಾರೆ. 2024ರಲ್ಲಿ ಆಸ್ಟ್ರೇಲಿಯಾ ಪರ ಒಟ್ಟು 15 ಟಿ20 ಪಂದ್ಯಗಳನ್ನಾಡಿ 178.47ರ ಸ್ಟ್ರೈಕ್‌ರೇಟ್‌ನಲ್ಲಿ 539 ರನ್ ಸಿಡಿಸಿ ಮಿಂಚಿದ್ದಾರೆ.

2. ಬಾಬರ್ ಆಜಂ: ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಬಾಬರ್ ಅಜಂ ಅವರು 2024ರಲ್ಲಿ ರನ್ ಹೊಳೆಯನ್ನೇ ಹರಿಸಿದ್ದಾರೆ. ಬಾಬರ್ ಅಜಂ ಪಾಕಿಸ್ತಾನ ಪರ 24 ಟಿ20 ಪಂದ್ಯಗಳನ್ನಾಡಿ 738 ರನ್ ಸಿಡಿಸಿದ್ದಾರೆ.

3. ಸಿಖಂದರ್ ರಾಜಾ : ಜಿಂಬಾಬ್ವೆ ಮೂಲದ ಸ್ಟಾರ್ ಆಲ್​ರೌಂಡರ್ ಸಿಖಂದರ್ ರಾಜಾ ಅವರ ಪಾಲಿಗೆ 2024ರ ವರ್ಷ ಅವಿಸ್ಮರಣೀಯವಾಗಿದೆ. ಈ ವರ್ಷ ರಾಜಾ ಜಿಂಬಾಬ್ವೆ ಪರ 24 ಟಿ20 ಪಂದ್ಯಗಳನ್ನು ಆಡಿ 573 ರನ್ ಸಿಡಿಸಿದ್ದಾರೆ. ಇನ್ನು ಇದಷ್ಟೇ ಅಲ್ಲದೇ ಬೌಲಿಂಗ್‌ನಲ್ಲಿ ರಾಜಾ 24 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

4. ಅರ್ಷ್‌ದೀಪ್‌ ಸಿಂಗ್ : ಟೀಂ ಇಂಡಿಯಾದ ಎಡಗೈ ವೇಗಿ ಅರ್ಷ್‌ದೀಪ್‌ ಸಿಂಗ್, ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಯ ರೇಸ್‌ನಲ್ಲಿರುವ ಏಕೈಕ ಭಾರತೀಯ ಆಟಗಾರರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅರ್ಶದೀಪ್ ಸಿಂಗ್ ಭಾರತ ಟಿ20 ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದಾರೆ. 2024ರಲ್ಲಿ ಅರ್ಷ್‌ದೀಪ್‌ ಭಾರತ ಪರ 18 ಟಿ20 ಪಂದ್ಯಗಳನ್ನಾಡಿ 36 ವಿಕೆಟ್ ಕಬಳಿಸಿದ್ದಾರೆ. 2024ರ ಟಿ20 ವಿಶ್ವಕಪ್‌ ಟೂರ್ನಿಯಲ್ಲೂ ಅರ್ಷ್‌ದೀಪ್‌ ಗರಿಷ್ಠ 17 ವಿಕೆಟ್‌ ಪಡೆದ ದಾಖಲೆ ಬರೆದಿದ್ದರು.

ಒಟ್ಟಿನಲ್ಲಿ 2024ರ ಐಸಿಸಿ ಪ್ರಶಸ್ತಿ ಭಾರೀ ಕುತೂಹಲ ಮೂಡಿಸಿದ್ದು ಯಾರಿಗೆ ಪ್ರಶಸ್ತಿಗರಿ ಅನ್ನೋದು ಕೆಲವೇ ದಿನಗಳಲ್ಲಿ ತಿಳಿಯಲಿದೆ.

ಇದನ್ನೂ ಓದಿ : ಮೃತ ಗುತ್ತಿಗೆದಾರ ಸಚಿನ್ ನಿವಾಸಕ್ಕೆ ಸಚಿವ ಖಂಡ್ರೆ ಭೇಟಿ – ಮನೆಯಿಂದ ಕಾಲ್ಕಿತ್ತ ಎಸ್​​ಪಿ ಪ್ರದೀಪ್ ಗುಂಟಿ!

Leave a Comment

DG Ad

RELATED LATEST NEWS

Top Headlines

ಪ್ರಯಾಣಿಕರಿಗೆ ಬಿಗ್​​ ಶಾಕ್​​.. ನಾಳೆಯಿಂದಲೇ KSRTC ಟಿಕೆಟ್​ ದರ​​​​ ಏರಿಕೆ – ನಿಮ್ಮ ಊರಿಗೆ ಎಷ್ಟು ರೇಟ್?

ಬೆಂಗಳೂರು : ರಾಜ್ಯ ಸರ್ಕಾರ ನಾಲ್ಕು ನಿಗಮಗಳ ಬಸ್​​ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಾಲು ಸಾಲು ಬೆಲೆ ಏರಿಕೆಯಿಂದ ತತ್ತರಿಸಿರೋ

Live Cricket

Add Your Heading Text Here