Download Our App

Follow us

Home » ಸಿನಿಮಾ » ನಟ ದರ್ಶನ್‌ಗೆ ಬಿಗ್​ ಶಾಕ್​ – ಈ ವಾರವೇ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಲು ಖಾಕಿ ಸಿದ್ಧತೆ..!

ನಟ ದರ್ಶನ್‌ಗೆ ಬಿಗ್​ ಶಾಕ್​ – ಈ ವಾರವೇ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಲು ಖಾಕಿ ಸಿದ್ಧತೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್‌ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆಯು ಪೊಲೀಸರಿಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದು, ದರ್ಶನ್‌ಗೆ ಮತ್ತೆ ಸಂಕಷ್ಟ ಶುರುವಾದಂತಾಗಿದೆ.

ದರ್ಶನ್‌, ಪವಿತ್ರಾಗೌಡ ಮತ್ತು ಇತರೆ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದರ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದ ಪೊಲೀಸರು, ಗೃಹ ಇಲಾಖೆಗೆ ಪತ್ರ ಬರೆದು ಅನುಮತಿ ಕೋರಿದ್ದರು. ಈ ಸಂಬಂಧ ಕಾನೂನು ತಜ್ಞರ ಅಭಿಪ್ರಾಯ ಪಡೆದು ಪರಿಶೀಲನೆ ನಡೆಸಿರುವ ಗೃಹ ಇಲಾಖೆಯು ಪೊಲೀಸರ ಕೋರಿಕೆಗೆ ಅಸ್ತು ಎಂದಿದೆ.

ಗೃಹ ಇಲಾಖೆಯ ಅಧಿಕೃತ ಆದೇಶದ ಪ್ರತಿಯು ಇಂದು ಪೊಲೀಸರ ಕೈಸೇರುವ ಸಾಧ್ಯತೆಯಿದ್ದು, ನಾಲ್ಕೈದು ದಿನಗಳಲ್ಲಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಹೀಗಾಗಿ, ದರ್ಶನ್‌, ಪವಿತ್ರಾ ಗೌಡ ಮತ್ತು ಇತರೆ ಆರೋಪಿಗಳಿಗೆ ಜಾಮೀನು ರದ್ದಾಗುವ ಆತಂಕ ಶುರುವಾಗಿದೆ. ಪೊಲೀಸರು ಹೈಕೋರ್ಟ್‌ನ ಜಾಮೀನು ಆದೇಶ ಪ್ರಶ್ನಿಸಿ ಸಲ್ಲಿಸಲಿರುವ ಮೇಲ್ಮನವಿಯಲ್ಲಿ ಯಾವೆಲ್ಲಾ ಅಂಶಗಳು ಇರಲಿವೆ ಎಂಬ ಬಗ್ಗೆ ಆರೋಪಿಗಳು ಚಿಂತಿತರಾಗಿದ್ದಾರೆ.

ಸುಪ್ರೀಂಕೋರ್ಟ್‌ ಪ್ರಕರಣ ಕೈಗೆತ್ತಿಕೊಂಡು ಜಾಮೀನು ರದ್ದುಪಡಿಸಿದರೆ ಎಲ್ಲಾ ಆರೋಪಿಗಳು ಮತ್ತೆ ಜೈಲಿಗೆ ಹೋಗಬೇಕಾಗುತ್ತದೆ. ಕೋರ್ಟ್‌ನಲ್ಲಿ ಸಮರ್ಥ ವಾದ ಮಂಡನೆಗೆ ಅನುಭವಿ ವಕೀಲರ ನೇಮಕಕ್ಕೆ ದರ್ಶನ್‌ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಕರಣದ ಹಿನ್ನೆಲೆ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೂ.11ರಂದು ಬಂಧಿತರಾಗಿದ್ದ ನಟ ದರ್ಶನ್‌, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ನಂತರ ಜೈಲಿನಲ್ಲಿ ರಾಜಾತಿಥ್ಯ ಪಡೆದ ಆರೋಪದ ಮೇಲೆ ಅವರನ್ನು ಆ.27ರಂದು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಬಳ್ಳಾರಿ ಜೈಲಿನಲ್ಲಿ ಬೆನ್ನು ನೋವು ಉಲ್ಬಣಗೊಂಡ ಕಾರಣಕ್ಕೆ ಶಸ್ತ್ರಚಿಕಿತ್ಸೆಯ ನೆಪ ಹೇಳಿ ಅವರು ಹೈಕೋರ್ಟ್‌ನಿಂದ ಅ.30ರಂದು ಮಧ್ಯಂತರ ಜಾಮೀನು ಪಡೆದಿದ್ದರು.

‘ದರ್ಶನ್‌ ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ತಕ್ಷಣವೇ ಸರ್ಜರಿ ಮಾಡದಿದ್ದರೆ ಅವರು ಪಾರ್ಶ್ವವಾಯುವಿಗೆ ತುತ್ತಾಗುವ ಅಥವಾ ಅವರ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆಯಿದೆ,’ ಎಂದು ದರ್ಶನ್‌ ಪರ ವಕೀಲರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು. ಹೀಗಾಗಿ, ಆರೋಗ್ಯದ ದೃಷ್ಟಿಯಿಂದ ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಬಳಿಕ ದರ್ಶನ್‌ ಅವರು ಬಳ್ಳಾರಿ ಕಾರಾಗೃಹದಿಂದ ಬಿಡುಗಡೆಯಾಗಿ ನ.1ರಂದು ಬಿಜಿಎಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ದರ್ಶನ್‌ಗೆ ಡಿ.11ರಂದು ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಈ ಮಧ್ಯೆ ಡಿ.13ರಂದು ಅವರಿಗೆ ಪೂರ್ಣಾವಧಿಗೆ ಜಾಮೀನು ಮಂಜೂರಾಗಿತ್ತು. ಹಾಗಾಗಿ ಯಾವುದೇ ಶಸ್ತ್ರಚಿಕಿತ್ಸೆ ಮಾಡಿಸದೇ ದರ್ಶನ್‌ ಆಸ್ಪತ್ರೆಯಿಂದ ಮನೆಗೆ ತರಳಿದ್ದರು. ಸದ್ಯ ಮೈಸೂರಿನ ತೋಟದ ಮನೆಯಲ್ಲಿ ದರ್ಶನ್​ ರಿಲ್ಯಾಕ್ಸ್​​ ಮಾಡುತ್ತಿದ್ದಾರೆ.

ಇದನ್ನೂ ಓದಿ : ಮೃತ ಗುತ್ತಿಗೆದಾರ ಸಚಿನ್ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ – ಸಿಬಿಐ ತನಿಖೆಗೆ ಕುಟುಂಬಸ್ಥರ ಒತ್ತಾಯ..!

Leave a Comment

DG Ad

RELATED LATEST NEWS

Top Headlines

“ಫಾರೆಸ್ಟ್”ಚಿತ್ರದ “ಪೈಸಾ ಪೈಸಾ ಪೈಸಾ” ಹಾಡಿಗೆ ಫ್ಯಾನ್ಸ್ ಫಿದಾ – ಅಡ್ವೆಂಚರ್ಸ್ ಕಾಮಿಡಿಯ ಸಿನಿಮಾ ಜನವರಿ 24ಕ್ಕೆ ರಿಲೀಸ್!

ಬೆಂಗಳೂರು : ಆರಂಭದಿಂದಲೂ ಕುತೂಹಲ ಮೂಡಿಸಿರುವ ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡು ಇತ್ತೀಚೆಗೆ ಬಿಡುಗಡೆಯಾಗಿ 5

Live Cricket

Add Your Heading Text Here