Download Our App

Follow us

Home » ಜಿಲ್ಲೆ » ನ್ಯೂ ಇಯರ್​ಗೆ ಗುಡ್​ ನ್ಯೂಸ್​ – ಜೋಗ್​ ಫಾಲ್ಸ್​ ವೀಕ್ಷಣೆಗೆ ಗ್ರೀನ್ ಸಿಗ್ನಲ್!

ನ್ಯೂ ಇಯರ್​ಗೆ ಗುಡ್​ ನ್ಯೂಸ್​ – ಜೋಗ್​ ಫಾಲ್ಸ್​ ವೀಕ್ಷಣೆಗೆ ಗ್ರೀನ್ ಸಿಗ್ನಲ್!

ಶಿವಮೊಗ್ಗ: ಹೊಸ ವರ್ಷಕ್ಕೆ ಪ್ರವಾಸಿಗರಿಗೆ ಶಿವಮೊಗ್ಗ ಜಿಲ್ಲಾಡಳಿತ ಗುಡ್​ ನ್ಯೂಸ್ ಕೊಟ್ಟಿದ್ದು ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧವನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಹೊಸ ವರ್ಷದ ಹಿನ್ನೆಲೆ ಅತಿ ಹೆಚ್ಚು ಪ್ರವಾಸಿಗರು ಬರುತ್ತಿರುವುದರಿಂದ  ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ದ್ವಾರವನ್ನು ಹೊರತುಪಡಿಸಿ ಉಳಿದ ಪರ್ಯಾಯ ಸ್ಥಳಗಳಿಂದ ಜಲಪಾತ ವೀಕ್ಷಣೆಗೆ ಅವಕಾಶ ನೀಡಿದೆ. 
ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ಜನವರಿ 1 ರಿಂದ ಮಾರ್ಚ್​15 ರವರೆಗೂ ಜಿಲ್ಲಾಡಳಿತ ಜೋಗ್ ಜಲಪಾತ​ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತು. ಇದೀಗ ಹೊಸವರ್ಷಾಚರಣೆ ಹಿನ್ನೆಲೆಯಲ್ಲಿ ವ್ಯಾಪಕವಾಗಿ ಪ್ರವಾಸಿಗರು ಜೋಗಕ್ಕೆ ಬರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಜೋಗ ನಿರ್ವಹಣಾ ಪ್ರಾಧಿಕಾರದ ಪ್ರವೇಶ ದ್ವಾರ ಬಿಟ್ಟು ಉಳಿದ ಸ್ಥಳಗಳಿಂದ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ. 

ಮುಖ್ಯ ರಸ್ತೆಯ ವೀವ್ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬಯಿ ಬಂಗಲೆ, ಮುಂಗಾರು ಮಳೆ ಪಾಯಿಂಟ್ ಸೇರಿದಂತೆ ಇತರೆ ಸ್ಥಳಗಳಿಂದ ಪ್ರವಾಸಿಗರು ಜಲಪಾತದ ಸೊಬಗು ಕಣ್ತುಂಬಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಜೋಗ ಜಲಪಾತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಜಲಪಾತ ವೀಕ್ಷಿಸಲು ತೆರಳುವ ಮುಖ್ಯ ಪ್ರವೇಶ ದ್ವಾರದ ಗೋಪುರ ನಿರ್ಮಾಣ ಕಾಮಗಾರಿಯೂ ಪ್ರಗತಿಯಲ್ಲಿದೆ. ಇದರಿಂದಾಗಿ 3 ತಿಂಗಳ ಕಾಲ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ನಿಬರ್ಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಪ್ರತಿ ವರ್ಷ ಡಿಸೆಂಬರ್ ಕೊನೆಯ ವಾರದಲ್ಲಿ ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿತ್ತು. ಆದರೆ, ಈ ವರ್ಷ ಪ್ರವೇಶ ನಿಷೇಧಿಸುವ ಮುನ್ನವೇ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿತ್ತು. ಜೋಗ ವೀಕ್ಷಣೆಯ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ :KAS ಸೇರಿ ವಿವಿಧ ಎಕ್ಸಾಮ್​ಗಳಲ್ಲಿ ಪಾಸ್ ಮಾಡಿಸೋದಾಗಿ ಲಕ್ಷ-ಲಕ್ಷ ವಂಚನೆ.. ಟಿಕೆಟ್ ಇನ್ಸ್‌ಪೆಕ್ಟರ್‌ ಬಂಧನ..!

Leave a Comment

DG Ad

RELATED LATEST NEWS

Top Headlines

“ಫಾರೆಸ್ಟ್”ಚಿತ್ರದ “ಪೈಸಾ ಪೈಸಾ ಪೈಸಾ” ಹಾಡಿಗೆ ಫ್ಯಾನ್ಸ್ ಫಿದಾ – ಅಡ್ವೆಂಚರ್ಸ್ ಕಾಮಿಡಿಯ ಸಿನಿಮಾ ಜನವರಿ 24ಕ್ಕೆ ರಿಲೀಸ್!

ಬೆಂಗಳೂರು : ಆರಂಭದಿಂದಲೂ ಕುತೂಹಲ ಮೂಡಿಸಿರುವ ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡು ಇತ್ತೀಚೆಗೆ ಬಿಡುಗಡೆಯಾಗಿ 5

Live Cricket

Add Your Heading Text Here