Download Our App

Follow us

Home » ಸಿನಿಮಾ » ಪ್ರಭಾಸ್-ಯಶ್-ಸೂರ್ಯ ರೆಕಾರ್ಡ್ ಬ್ರೇಕ್.. ‘ಗೇಮ್ ಚೇಂಜರ್’ಗಾಗಿ ತಲೆ ಎತ್ತಿದ ‘ಚೆರ್ರಿ’ 256 ಅಡಿ ಎತ್ತರದ ಕಟೌಟ್!

ಪ್ರಭಾಸ್-ಯಶ್-ಸೂರ್ಯ ರೆಕಾರ್ಡ್ ಬ್ರೇಕ್.. ‘ಗೇಮ್ ಚೇಂಜರ್’ಗಾಗಿ ತಲೆ ಎತ್ತಿದ ‘ಚೆರ್ರಿ’ 256 ಅಡಿ ಎತ್ತರದ ಕಟೌಟ್!

ವಿಜಯವಾಡ : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಗೇಮ್ ಚೇಂಜರ್’ ಬಿಡುಗಡೆಗೆ ಸಜ್ಜಾಗಿದೆ. ಅಮೆರಿಕಾದ ನೆಲದಲ್ಲಿ ಅದ್ಧೂರಿ ಪ್ರೀ-ರಿಲೀಸ್ ಇವೆಂಟ್ ಮಾಡುವ ಮೂಲಕ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಇದುವರೆಗೆ ಯಾವ ಚಿತ್ರತಂಡ ಮಾಡದ ದಾಖಲೆ ‘ಗೇಮ್ ಚೇಂಜರ್’ ಮಾಡಿದೆ. ಇದೀಗ ಚೆರ್ರಿ ಅಭಿಮಾನಿಗಳು ಕೂಡ ಗೇಮ್ ಚೇಂಜರ್ ಸಿನಿಮಾ ಮೂಲಕ ಹೊಸ ರೆಕಾರ್ಡ್ ಕ್ರಿಯೇಟ್ ಮಾಡಿದ್ದಾರೆ.

ಜನವರಿ 10ರಂದು ಗೇಮ್ ಚೇಂಜರ್ ಚಿತ್ರ ಬಿಡುಗಡೆಯಾಗುತ್ತಿರುವ ಹಿನ್ನೆಲೆ ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಬೃಂದಾವನ ಕಾಲೋನಿಯ ವಜ್ರ ಗ್ರೌಂಡ್ಸ್‌ನಲ್ಲಿ ನಟ ರಾಮ್‌ಚರಣ್ ಅವರ 256 ಅಡಿ ಎತ್ತರದ ಕಟೌಟ್‌ ನಿಲ್ಲಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಇದು ಭಾರತದ ಅತೀ ದೊಡ್ಡ ಕಟೌಟ್ ಎನ್ನುವ ದಾಖಲೆಯನ್ನು ಬರೆದಿದೆ. 4 ವರ್ಷಗಳ ಹಿಂದೆ ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಅಭಿಮಾನಿಗಳು ರಾಕಿಂಗ್ ಸ್ಟಾರ್ ಯಶ್ ಅವರ 236 ಅಡಿ ಎತ್ತರದ ಕಟೌಟ್ ನಿಲ್ಲಿಸಿದ್ದರು. ಇದಕ್ಕೂ ಮುನ್ನ ತಮಿಳುನಾಡಿನಲ್ಲಿ ಸೂರ್ಯ ಅವರ ಅಭಿಮಾನಿಗಳು 215 ಅಡಿ ಎತ್ತರದ ಕಟೌಟ್ ನಿಲ್ಲಿಸಿ ದಾಖಲೆ ಬರೆದಿದ್ದರು. ಇನ್ನು ಕಳೆದ ವರ್ಷ ಪ್ರಭಾಸ್ ಅಭಿಮಾನಿಗಳು 230 ಅಡಿ ಕಟೌಟ್ ನಿಲ್ಲಿಸಿದ್ದು ಕೂಡ ದಾಖಲೆಯ ಪುಟಗಳಿಗೆ ಸೇರಿತ್ತು. ಇದೀಗ ರಾಮ್‌ಚರಣ್ ಅಭಿಮಾನಿಗಳು ಈ ಎಲ್ಲ ದಾಖಲೆಗಳನ್ನು ಮುರಿದಿದ್ದು, ಚೆರ್ರಿಯ 256 ಅಡಿ ಎತ್ತರದ ಕಟೌಟ್‌ ನಿಲ್ಲಿಸಿ ಕೇಕೇ ಹಾಕೋದಿಕ್ಕೆ ರೆಡಿಯಾಗಿದ್ದಾರೆ.

‘ಆರ್‌ಆರ್‌ಆರ್’ ಸಿನಿಮಾ ಬಳಿಕ ರಾಮ್‌ಚರಣ್ ನಟಿಸಿದ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ಹೀಗಾಗಿ ಮೆಗಾ ಫ್ಯಾನ್ಸ್ ‘ಗೇಮ್‌ ಚೇಂಜರ್’ ದರ್ಶನಕ್ಕೆ ಕಾಯುತ್ತಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಗೇಮ್ ಚೇಂಜರ್​ಗೆ ಆಕ್ಷನ್ ಕಟ್ ಹೇಳಿದ್ದಾರೆ. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಮತ್ತು ಜೀ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ದಿಲ್ ರಾಜು ಮತ್ತು ಸಿರಿಶ್ ನಿರ್ಮಿಸುತ್ತಿರುವ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಗೇಮ್ ಚೇಂಜರ್​ನಲ್ಲಿ ರಾಮ್ ಚರಣ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಕಿಯಾರಾ ಅಡ್ವಾಣಿ, ಅಂಜಲಿ, ಎಸ್ ಜೆ ಸೂರ್ಯ, ಶ್ರೀಕಾಂತ್, ಸುನಿಲ್, ಸಮುದ್ರಕನಿ ಮತ್ತು ಜಯರಾಮ್ ಮತ್ತಿತರರು ತಾರಾಬಳಗದಲ್ಲಿದ್ದಾರೆ.

ಕಾರ್ತಿಕ್ ಸುಬ್ಬರಾಜ್ ಕಥೆ ಬರೆದಿದ್ದಾರೆ. ಎಸ್.ಯು.ವೆಂಕಟೇಶನ್ ಮತ್ತು ವಿವೇಕ್ ಬರಹಗಾರರಾಗಿ ಕೆಲಸ ಮಾಡಿದ್ದಾರೆ. ಹರ್ಷಿತ್ ಚಿತ್ರದ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಸಾಯಿ ಮಾಧವ್ ಬುರ್ರಾ ಸಂಭಾಷಣೆ ಬರೆದಿದ್ದಾರೆ. ಎಸ್ ಥಮನ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಎಸ್ ತಿರುನಾವುಕ್ಕರಸು ಛಾಯಾಗ್ರಹಣವನ್ನು ನಿಭಾಯಿಸಿದ್ದಾರೆ. ಅವಿನಾಶ್ ಕೊಲ್ಲಾ ಆಕ್ಷನ್ ಕೊರಿಯೋಗ್ರಾಫರ್ ಆಗಿ ಕಾರ್ಯನಿರ್ವಹಿಸಿದ್ದು, ಅನ್ಬೀರವ್ ಆಕ್ಷನ್ ದೃಶ್ಯಗಳನ್ನು ಸಂಯೋಜಿಸಿದ್ದು, ಪ್ರಭುದೇವ, ಗಣೇಶ್ ಆಚಾರ್ಯ, ಪ್ರೇಮ್ ರಕ್ಷಿತ್, ಬಾಸ್ಕೊ ಮಾರ್ಟಿನ್, ಜಾನಿ ಮತ್ತು ಸ್ಯಾಂಡಿ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಜನವರಿ 10, 2025 ರಂದು ‘ಗೇಮ್‌ ಚೇಂಜರ್’ ಚಿತ್ರವು ತೆಲುಗು, ಕನ್ನಡ, ತಮಿಳು ಮತ್ತು ಹಿಂದಿಯಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ : ಸಂಜು ವೆಡ್ಸ್ ಗೀತಾ-2 ಸಿನಿಮಾಗೆ ಕಿಚ್ಚ ಸಾಥ್ – ಮತ್ತೊಂದು ಹಾಡು ರಿಲೀಸ್!

Leave a Comment

DG Ad

RELATED LATEST NEWS

Top Headlines

ಕರ್ನಾಟಕದಲ್ಲಿಂದು ಐತಿಹಾಸಿಕ ಬೆಳವಣಿಗೆ – ಮುಂಡಗಾರು ಲತಾ ಸೇರಿ 6 ನಕ್ಸಲರು ಶರಣಾಗತಿ.. ಪ್ರಕ್ರಿಯೆ ಹೇಗಿರಲಿದೆ?

ಚಿಕ್ಕಮಗಳೂರು : ಇಂದು (ಜ.08) ಕರ್ನಾಟಕದ ಇತಿಹಾಸದಲ್ಲೇ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನವಾಗಲಿದೆ. ಕರ್ನಾಟಕ, ಕೇರಳ, ತಮಿಳುನಾಡು ಮೂಲದ 6 ಮೋಸ್ಟ್‌ ವಾಂಟೆಡ್‌ ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ

Live Cricket

Add Your Heading Text Here