Download Our App

Follow us

Home » ರಾಜಕೀಯ » “ಗೋಲ್ಡ್” ವಂಚಕಿ ಐಶ್ವರ್ಯಾ ಗೌಡ ವಿರುದ್ಧ ಮಾಜಿ ಸಂಸದ ಡಿ.ಕೆ. ಸುರೇಶ್ ಕಂಪ್ಲೇಂಟ್..!

“ಗೋಲ್ಡ್” ವಂಚಕಿ ಐಶ್ವರ್ಯಾ ಗೌಡ ವಿರುದ್ಧ ಮಾಜಿ ಸಂಸದ ಡಿ.ಕೆ. ಸುರೇಶ್ ಕಂಪ್ಲೇಂಟ್..!

ಬೆಂಗಳೂರು : ಮಾಜಿ ಸಂಸದ ಡಿ.ಕೆ ಸುರೇಶ್ ಅವರ ತಂಗಿ ಎಂದು ಹೇಳಿಕೊಂಡು ಐಶ್ವರ್ಯಾ ಗೌಡ ವಾರಾಹಿ ವರ್ಲ್ಡ್​ ಆಫ್ ಗೋಲ್ಡ್ ಶಾಪ್ ಮಾಲೀಕರಿಗೆ ಕೋಟ್ಯಾಂತರ ರೂ ವಂಚಿಸಿದ್ದಾಳೆ. ಈ ಪ್ರಕರಣ ಸಂಬಂಧ ಐಶ್ವರ್ಯಾ ಗೌಡ ಹಾಗೂ ಅವರ ಪತಿ ಹರೀಶ್ ಪರಪ್ಪನ ಅಗ್ರಹಾರ ಸೇರಿದ್ದಾರೆ. ಇದೀಗ ಡಿಕೆ ಸುರೇಶ್ ಅವರು ಹೆಸರು ದುರುಪಯೋಗ ಮಾಡುತ್ತಿರುವವರ ವಿರುದ್ದ ದೂರು ನೀಡಿದ್ದಾರೆ.

ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿಕೆ ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

“ಶ್ರೀಮತಿ ಐಶ್ವರ್ಯಾ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ. ಹೀಗಾಗಿ, ನನ್ನ ಹೆಸರು ಬಳಸಿಕೊಂಡು ವಂಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು”‘ ಎಂದು ಡಿಕೆ ಸುರೇಶ್ ದೂರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : ಕೈನಲ್ಲೇ ಡೆತ್​​​ನೋಟ್ ಹಿಡ್ಕೊಂಡು KSDL ಅಧಿಕಾರಿ ಆತ್ಮಹತ್ಯೆ..!

Leave a Comment

DG Ad

RELATED LATEST NEWS

Top Headlines

ಮತ್ತೊಂದು ಸ್ಟಾರ್ ಜೋಡಿಯ ಡಿವೋರ್ಸ್ ಪಕ್ಕಾನಾ – ಇನ್‌ಸ್ಟಾಗ್ರಾಂನಲ್ಲಿ ಅನ್‌ಫಾಲೋ ಮಾಡಿದ ದಂಪತಿ!

ಮುಂಬೈ: ಟಿಂ ಇಂಡಿಯಾದ ಆಲ್​​ರೌಂಡರ್​ ಹಾರ್ದಿಕ್ ಪಾಂಡ್ಯಾ ಡಿವೋರ್ಸ್​ ಬೆನ್ನಲ್ಲೇ ಇದೀಗ ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಆಟಗಾರನ ವಿಚ್ಛೇದನ ಸುದ್ದಿ ವ್ಯಾಪಕ ಚರ್ಚೆಯಾಗುತ್ತಿದೆ.  ಭಾರತದ ತಂಡದ

Live Cricket

Add Your Heading Text Here