ಕೋಲಾರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು ಓರ್ವ ಪ್ರಯಾಣಿಕ ದುರ್ಮರಣಕ್ಕೀಡಾಗಿದ್ದಾನೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಗ್ರಾಮದ ಬಳಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಪುನಗೋಡ ಗ್ರಾಮದ 22 ವರ್ಷದ ಅನಿಲ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಆಂಧ್ರಪ್ರದೇಶದ ಕಡಪಗೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಖಾಸಗಿ ಬಸ್ ಚಾಲಕನ ನಿಯಂತ್ರಣದ ತಪ್ಪಿ ಪಲ್ಟಿ ಹೊಡೆದಿದೆ. ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು 17 ಪ್ರಯಾಣಿಕರಿಗೆ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ನಲ್ಲಿದ್ದ ಗಾಯಾಳುಗಳನ್ನು ಸ್ಥಳೀಯರು ಹಾಗೂ 108 ಆ್ಯಂಬುಲೆನ್ಸ್ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿಸಿದ್ದಾರೆ. ಸ್ಥಳಕ್ಕೆ ರಾಯಲ್ಪಾಡು ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಹೊಸ ವರ್ಷದ ಮೋಜು ಮಸ್ತಿಗೆ ಬ್ರೇಕ್.. ಶಿವಗಂಗೆ ಬೆಟ್ಟಕ್ಕೆ ನೋ ಎಂಟ್ರಿ!
Post Views: 701